ರಾಜ್ಯ

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದ್! Ration Card e-KYC ಮಾಡಿಸದಿದ್ರೆ ಏನೆಲ್ಲಾ ಬಂದ್ ಆಗುತ್ತೆ ಗೊತ್ತಾ?

ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸರ್ಕಾರದಿಂದ ಸಿಗುವ ಹಲವು ಪ್ರಮುಖ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಆ ಕುರಿತ ವರದಿ ಇಲ್ಲಿದೆ:

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದ್! Ration Card e-KYC ಮಾಡಿಸದಿದ್ರೆ ಏನೆಲ್ಲಾ ಬಂದ್ ಆಗುತ್ತೆ ಗೊತ್ತಾ?
Ration Card e-KYC ಮಾಡಿಸದಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ? — AI Image
Published On :

ಬೆಂಗಳೂರು: ಉಚಿತ ಅಕ್ಕಿಯಿಂದ ಹಿಡಿದು ಆಯುಷ್ಮಾನ್ ಭಾರತ್, ಭಾಗ್ಯ ಜ್ಯೋತಿ, ಉಚಿತ ಎಲ್‌ಪಿಜಿ ಸಂಪರ್ಕ, ಉಚಿತ ವಸತಿ ಯೋಜನೆಗಳು ಸೇರಿದಂತೆ ಸರ್ಕಾರದ ಹಲವು ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯ; ಆದರೆ, ಈ ರೇಷನ್ ಕಾರ್ಡ್ ಆಕ್ಟಿವ್ ಆಗಿರಬೇಕು ಅಂದರೆ ಮುಂದಿನ ತಿಂಗಳು 20ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ! ಅಕಸ್ಮಾತ್, ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸರ್ಕಾರದಿಂದ ಸಿಗುವ ಹಲವು ಪ್ರಮುಖ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಹಾಗಾದ್ರೆ, ನಿಗದಿತ ಗಡುವಿನೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಯಾವೆಲ್ಲಾ ಸೌಲಭ್ಯಗಳು ಸ್ಥಗಿತಗೊಳ್ಳಬಹುದು ಮತ್ತು ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯ ಕುರಿತ ಮಾಹಿತಿ ಇಲ್ಲಿದೆ:

  • ಉಚಿತ ಪಡಿತರ (ಅಕ್ಕಿ) ಸ್ಥಗಿತ: ಪಡಿತರ ಚೀಟಿಯಲ್ಲಿ ಹೆಸರಿದ್ದು, ಇ-ಕೆವೈಸಿ ಮಾಡಿಸದ ಸದಸ್ಯರ ಪಾಲಿನ ಉಚಿತ ಅಕ್ಕಿ ಅಥವಾ ಆಹಾರ ಧಾನ್ಯಗಳ ವಿತರಣೆಯನ್ನು ಸ್ಥಗಿತಗೊಳಿಸಲಾಗುತ್ತದೆ.

  • ಗೃಹಲಕ್ಷ್ಮಿ ಯೋಜನೆ ಹಣ ಬಂದ್: ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ ಹೊಂದಿರುವ ಕುಟುಂಬದ ಯಜಮಾನಿಗೆ ಸಿಗುವ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2,000 ಹಣದ ಸೌಲಭ್ಯಕ್ಕೂ ತಡೆಯುಂಟಾಗಬಹುದು.

  • ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆ: ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಸರ್ಕಾರ ನೀಡುತ್ತಿರುವ ಹಣ ವರ್ಗಾವಣೆ ಪ್ರಕ್ರಿಯೆಯು ಸ್ಥಗಿತಗೊಳ್ಳುತ್ತದೆ.

  • ಪಡಿತರ ಚೀಟಿ ಅಮಾನತು/ರದ್ದು: ದೀರ್ಘಕಾಲದವರೆಗೆ ಇ-ಕೆವೈಸಿ ಮಾಡಿಸದಿದ್ದರೆ ಆ ಕಾರ್ಡ್‌ಗಳನ್ನು ಅನರ್ಹ ಅಥವಾ ನಿಷ್ಕ್ರಿಯ ಎಂದು ಪರಿಗಣಿಸಿ ಪಡಿತರ ಚೀಟಿಯನ್ನೇ ರದ್ದುಗೊಳಿಸುವ ಸಾಧ್ಯತೆ ಇರುತ್ತದೆ.

  • ಸರ್ಕಾರಿ ಯೋಜನೆಗಳ ಸೌಲಭ್ಯಕ್ಕೆ ಬ್ರೇಕ್: ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ವಿದ್ಯಾರ್ಥಿ ವೇತನ, ಉಚಿತ ವಸತಿ ಯೋಜನೆಗಳು ಮತ್ತು ಸರ್ಕಾರದ ಇತರೆ ಸಬ್ಸಿಡಿ ಸೌಲಭ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಅಗತ್ಯವಿದ್ದು, ಇ-ಕೆವೈಸಿ ಆಗದಿದ್ದರೆ ಈ ಯಾವುದೇ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.

ಹಾಗಾದ್ರೆ, ಇ-ಕೆವೈಸಿ ಮಾಡಿಸುವುದು ಹೇಗೆ?

  • ನ್ಯಾಯಬೆಲೆ ಅಂಗಡಿ (ರೇಷನ್ ಶಾಪ್): ನಿಮ್ಮ ವ್ಯಾಪ್ತಿಯ ರೇಷನ್ ಅಂಗಡಿಗೆ ಕುಟುಂಬದ ಎಲ್ಲಾ ಸದಸ್ಯರು ಆಧಾರ್ ಕಾರ್ಡ್‌ನೊಂದಿಗೆ ಭೇಟಿ ನೀಡಿ, ಇ-ಪೋಸ್ ಯಂತ್ರದಲ್ಲಿ ಹೆಬ್ಬೆರಳ ಗುರುತು ನೀಡುವ ಮೂಲಕ ಉಚಿತವಾಗಿ ಮಾಡಿಸಬಹುದು.

  • ಮೊಬೈಲ್ ಆ್ಯಪ್: ಸಾರ್ವಜನಿಕರ ಅನುಕೂಲಕ್ಕಾಗಿ ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಮುಖಚರ್ಯೆ ಬಳಸಿ ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಇ-ಕೆವೈಸಿ ಮಾಡುವ ಹೊಸ ಸೌಲಭ್ಯವನ್ನು ಶೀಘ್ರದಲ್ಲೇ ಜಾರಿಗೆ ತರಲಿದ್ದಾರೆ.

ಇ-ಕೆವೈಸಿ ಮಾಡಿಸಲು ಬೇಕಾಗುವ ಪ್ರಮುಖ ದಾಖಲೆಗಳು:

  • ರೇಷನ್ ಕಾರ್ಡ್‌ ಸಂಖ್ಯೆ

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.