ರಾಜ್ಯ

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ಪಾಲಿಕೆ ಅಧಿಕಾರಿಗಳಿಂದ ತೆರವು!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ಕಲ್ಯಾಣ ಕರ್ನಾಟಕ ಉತ್ಸವ'ಕ್ಕಾಗಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದೇ ವೃತ್ತದ ಮೂಲಕ ಅಫಜಲಪುರಕ್ಕೆ ಪ್ರಯಾಣಿಸುವ ಕಾರ್ಯಕ್ರಮ ನಿಗದಿಯಾಗಿದೆ.

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ಪಾಲಿಕೆ ಅಧಿಕಾರಿಗಳಿಂದ ತೆರವು!
ಸಿದ್ದರಾಮಯ್ಯ ಪ್ರತಿಮೆ
Published On :

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನಗರದಲ್ಲಿ ವಾಸ್ತವ್ಯ ಹೂಡಿದ್ದ ವೇಳೆಯಲ್ಲೇ, ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಮೂರ್ತಿಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದಾರೆ.

ಹೈಕೋರ್ಟ್ ಕ್ರಾಸ್ ಬಳಿ, ಈ ಹಿಂದೆ 'ಸಿದ್ದರಾಮಯ್ಯ ವೃತ್ತ' ಎಂದು ಹೆಸರಿಸಲಾದ ಸ್ಥಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ಕಲ್ಯಾಣ ಕರ್ನಾಟಕ ಉತ್ಸವ'ಕ್ಕಾಗಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದೇ ವೃತ್ತದ ಮೂಲಕ ಅಫಜಲಪುರಕ್ಕೆ ಪ್ರಯಾಣಿಸುವ ಕಾರ್ಯಕ್ರಮ ನಿಗದಿಯಾಗಿದೆ.

ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ ಈ ಪ್ರತಿಮೆ ಸ್ಥಾಪಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆ ಈ ಕಠಿಣ ಕ್ರಮ ಕೈಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.