ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ-ಮದರಸಾ ಮೇಲೆ ಕಲ್ಲು ತೂರಾಟ: ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್! Video
ಮಸೀದಿಯತ್ತ ಕಲ್ಲು ತೂರಿದ ಕಿಡಿಗೇಡಿಗಳು ಕಿಟಕಿ ಗಾಜುಗಳು ಒಡೆದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಯುವಕರ ಗುಂಪು ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದೆ.

ಕಾರವಾರ: ಭಟ್ಕಳ: ತಾಲ್ಲೂಕಿನ ತಲಾಂದ ಸಾರ್ವಜನಿಕ ಗಣೆಶೋತ್ಸ ವಿಸರ್ಜನೆ ಮೆರವಣಿಗೆ ಸಾಗುವ ವೇಳೆ ಬುಧವಾರ ತಡ ರಾತ್ರಿ ಮಾರ್ಗ ಮಧ್ಯೆ ಗುಳ್ಮಿಯ ಇಸ್ಮಾಯಿಲ್ ಮಸೀದಿ ಎದುರು ಕಲ್ಲು ತೂರಾಟ ನಡೆದಿದೆ.
ತಲಾಂದದಿಂದ ಹೊರಟ ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ, ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾದ ಮೇಲೆ ಅಪರಿಚಿತರು ಕಲ್ಲುಗಳನ್ನು ತೂರಿದ್ದಾರೆ.
ಮಸೀದಿಯತ್ತ ಕಲ್ಲು ತೂರಿದ ಕಿಡಿಗೇಡಿಗಳು ಕಿಟಕಿ ಗಾಜುಗಳು ಒಡೆದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಯುವಕರ ಗುಂಪು ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದೆ. ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ನಿಟ್ಟಿನಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಕಲ್ಲು ತೂರಾಟದ ಸುದ್ದಿ ಹರಡುತ್ತಿದ್ದಂತೆಯೇ ಮುಸ್ಲಿಂ ಸಮುದಾಯದ ನೂರಾರು ಜನರು ಭಟ್ಕಳ ನಗರ ಪೊಲೀಸ್ ಠಾಣೆಯ ಎದುರು ಜಮಾಯಿಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಬಂದರು ರಸ್ತೆ ನಿವಾಸಿ ಅಬ್ದುಲ್ ಅಲಿಂ ಹಾಗೂ ಶಾಹುಲ್ ಅಮೀನ್ ಗವಾಯಿ ಅವರು ನೀಡಿದ ದೂರಿನನ್ವಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಗಂಭೀರತೆ ಅರಿತು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೆಲ ಸದಸ್ಯರನ್ನು ಠಾಣೆಗೆ ಕರೆಸಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



