ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ
2026 ರ ಡಿಸೆಂಬರ್ ಒಳಗೆ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದಿನ ಸಚಿವ ಸಂಪುಟ ತೀರ್ಮಾನಿಸಿದೆ.

ಮಂಗಳೂರು: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಲವು ಮಹತ್ವ್ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು ಈ ಪೈಕಿ ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆಗೂ ಮಹತ್ವದ ನಿರ್ಧಾರವೂ ಸೇರಿದೆ.
2026 ರ ಡಿಸೆಂಬರ್ ಒಳಗೆ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದಿನ ಸಚಿವ ಸಂಪುಟ ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಾ ಜಿ. ಪರಮೇಶ್ವರ್, ರಾಜ್ಯದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಅವಧಿ ಪೂರ್ಣಗೊಂಡಿದ್ದು, ಡಿಸೆಂಬರ್ ಒಳಗೆ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ. ಚುನಾವಣೆ ನಡೆಸಲು EVM ಬದಲಿಗೆ ಮತಪೆಟ್ಟಿಗೆ ಬಳಕೆಗೆ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.
ಚುನಾವಣೆ ನಡೆಸಲು ಅಗತ್ಯ ಮತಪೆಟ್ಟಿಗೆ ಖರೀದಿ ಮತ್ತು Live webcasting ಮಾಡಲು 151.31 ಕೋಟಿ ರೂ. ವೆಚ್ಚಕ್ಕೆ ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುಂತೆ ಕಾಂಗ್ರೆಸ್ ತನ್ನ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಿದೆ.
ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗೆ ಹೊಸದಾಗಿ ನೇಮಕಗೊಂಡಿರುವ ಎಲ್ಲ ಜಿಲ್ಲಾಧ್ಯಕ್ಷರುಗಳ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಪ್ರಮುಖ ನಾಯಕರುಗಳು ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



