'ಯಾರೂ ಗಾಬರಿಪಟ್ಟುಕೊಳ್ಳಬೇಕಾಗಿಲ್ಲ, ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ': ಮಂಗಳೂರಿನಲ್ಲಿ CM ಶಿವಕುಮಾರ್; Video
1934ರಲ್ಲಿ ಮಹಾತ್ಮ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ಸ್ಥಳದ ಸಮೀಪದಲ್ಲೇ ಈ ಕೆಫೆ ಇದೆ.

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೆ ಮೊದಲ ಬಾರಿ ನಡೆಯುವ ರಾಜ್ಯ ವಿಶೇಷ ಸಚಿವ ಸಂಪ ಟ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರು ಆಗಮಿಸಿದ್ದಾರೆ. ಇಂದು ಶುಕ್ರವಾ ರ ಬೆಳಗ್ಗೆ ಸಿಎಂ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅಲ್ಲಿಂದ ಮಹಾತ್ಮ ಗಾಂಧಿ ಅವರು ಉಳಿದಿದ್ದ ಮನೆಗೆ ಭೇಟಿ ನೀಡಿ ಕೆಫೆಯಲ್ಲಿ ಮಂಗಳೂರು ಶೈಲಿಯ ಬೆಳಗಿನ ಉಪಹಾರ ಸವಿದರು. ಮಂಗಳೂರಿನ ಯುವ ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್‌ಗಳೊಂದಿಗೆ ನಗರದ ಗಾಂಧಿ ಸ್ಕ್ವೇರ್ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಂವಾದ ನಡೆಸಿದರು.
1934ರಲ್ಲಿ ಮಹಾತ್ಮ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ಸ್ಥಳದ ಸಮೀಪದಲ್ಲೇ ಈ ಕೆಫೆ ಇದೆ.
ಸರಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ''ಮಹಾತ್ಮ ಗಾಂಧಿ ಅವರು ಉಳಿದಿದ್ದ ಮನೆಗೆ ಹೋಗಿದ್ದೆ ಅಲ್ಲಿ ಉಪಾಹಾರ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ ಎಂದು ನಗುತ್ತಾ ಹೇಳಿದರು.
ಮಂಗಳೂರು ಬನ್ಸ್, ದೋಸೆ ಎಲ್ಲಾ ಸವಿದೆ. ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ ಎಂದು ಹೇಳಿದರು.
ಯಾರೂ ಗಾಬರಿಯಾಗಬೇಕಿಲ್ಲ.ನಮಗೆ ಜನರ ಬದುಕು ಮುಖ್ಯ, ನಾವು ಜನರ ಬದುಕಿನ ಮೇಲೆ ರಾಜಕೀಯ ಮಾ ಡುವವರು, ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ.ಯಾರೂ ಗಾಬರಿಪಡಬೇಕಿಲ್ಲ ಎಲ್ಲರ ಚಿಂ ತನೆಯನ್ನೊಳಗೊಂಡು ನಮ್ಮ ಸರಕಾರ ಕೆಲಸ ಮಾಡಲಿದೆ ಎಂದು ಸಿಎಂ ಹೇಳಿದರು .
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು , ಸಿಎಂ ಭವ್ಯ ಸ್ವಾಗತಕ್ಕೆ ತಯಾರಿ ನಡೆಸಲಾಗಿದೆ. ಚೆಂಡೆ ಬ್ಯಾಂಡ್ ಸೆಟ್ ವಿವಿಧ ವೇಷಧಾರಿಗಳ ತಂಡಗಳು ಸಿದ್ದವಾಗಿ ಗಮನ ಸೆಳೆದೆವು . ಪಂಪ್ ವೆಲ್ ನಿಂದ ಪಡೀಲ್ ವರೆಗೆ ಅಲ್ಲಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ಜಮಾಯಿಸಿದ್ದು , ಸಿಎಂ ನೋಡಲು ರಸ್ತೆ ಬದಿ ಕಾದು ನಿಂತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



