ಮಂಗಳೂರು ಜೈಲು ಜಾಮರ್ ಕಿರಿಕಿರಿ: ಸಮಸ್ಯೆ ನಿವಾರಣೆಗೆ ತಾಂತ್ರಿಕ ಕ್ರಮ; ಸಚಿವ ಪ್ರಿಯಾಂಕ್ ಖರ್ಗೆ
ಬಳಿಕ ಸಂಬಂಧಿಸಿದ ಸಂಸ್ಥೆಯು ಆಂಟೆನಾ ವಿನ್ಯಾಸ ಮತ್ತು ಜಾಮರ್‌ನ ಕಾರ್ಯಾಚರಣಾ ಸಾಮರ್ಥ್ಯದಲ್ಲಿ ಬದಲಾವಣೆಗಳನ್ನು ಮಾಡಿದ್ದು, ಸಿಗ್ನಲ್ ವ್ಯತ್ಯಯವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದೆ.

ಬೆಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸೇವೆ ವ್ಯತ್ಯಯಗೊಳ್ಳುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ನಿಟ್ಟಿನಲ್ಲಿ ಸಮಸ್ಯೆ ನಿವಾರಣೆಗೆ ತಾಂತ್ರಿಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, ಜೈಲು ಸುತ್ತಮುತ್ತ ಉಂಟಾಗುತ್ತಿರುವ ನೆಟ್‌ವರ್ಕ್ ವ್ಯತ್ಯಯದ ಕುರಿತು ಈಗಾಗಲೇ ಜಂಟಿ ತಾಂತ್ರಿಕ ಸಮೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಬಳಿಕ ಸಂಬಂಧಿಸಿದ ಸಂಸ್ಥೆಯು ಆಂಟೆನಾ ವಿನ್ಯಾಸ ಮತ್ತು ಜಾಮರ್‌ನ ಕಾರ್ಯಾಚರಣಾ ಸಾಮರ್ಥ್ಯದಲ್ಲಿ ಬದಲಾವಣೆಗಳನ್ನು ಮಾಡಿದ್ದು, ಸಿಗ್ನಲ್ ವ್ಯತ್ಯಯವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ಜೈಲಿನ ಭದ್ರತೆಗಾಗಿ ಜಾಮರ್‌ಗಳು ತಮ್ಮ ಕಾರ್ಯವನ್ನು ಮುಂದುವರಿಸುವುದರ ಜೊತೆಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮೊಬೈಲ್ ಸೇವೆಗೆ ಉಂಟಾಗುವ ಅಡಚಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ದೂರಸಂಪರ್ಕ ಸೇವಾ ಪೂರೈಕೆದಾರರೊಂದಿಗೆ ಅಧಿಕಾರಿಗಳು ಮತ್ತಷ್ಟು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ವಾಸಿಸುವ ಜನರು, ವ್ಯಾಪಾರಿಗಳು ಹಾಗೂ ವಿವಿಧ ಸಂಸ್ಥೆಗಳು ಬಹುಕಾಲದಿಂದ ನೆಟ್‌ವರ್ಕ್ ಸಮಸ್ಯೆ ಕುರಿತು ದೂರು ನೀಡುತ್ತಿವೆ.
ಜೈಲಿನಿಂದ ಸುಮಾರು 1ರಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕರೆಗಳು ಕಡಿತಗೊಳ್ಳುವುದು, ಯುಪಿಐ ವಹಿವಾಟುಗಳು ವಿಫಲವಾಗುವುದು ಹಾಗೂ ಇಂಟರ್‌ನೆಟ್ ಸಂಪರ್ಕ ಕಡಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಸ್ಥಳೀಯರು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ.
5ಜಿ ಸೌಲಭ್ಯ ಹೊಂದಿರುವ ಮೊಬೈಲ್ ಫೋನ್‌ಗಳನ್ನು ನಿಯಂತ್ರಿಸುವ ಉದ್ದೇಶದಿಂದ ಜಾಮರ್‌ಗಳ ಸಾಮರ್ಥ್ಯ ಹೆಚ್ಚಿಸಿದ ಬಳಿಕ ಸಮಸ್ಯೆ ಮತ್ತಷ್ಟು ತೀವ್ರಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲು ಆವರಣಕ್ಕೆ ತೆರಳಿ ಜಾಮರ್‌ಗಳನ್ನು ನಿಷ್ಕ್ರಿಯಗೊಳಿಸುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಜಾಮರ್‌ಗಳಿಂದ ಸಮೀಪದಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲೂ ಸಂಪರ್ಕಕ್ಕೆ ಅಡಚಣೆ ಉಂಟಾಗುತ್ತಿದೆ ಎಂದು ಆರೋಪಿಸಿ ಮಂಗಳೂರು ವಕೀಲರ ಸಂಘ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿತ್ತು.
ಈ ಬೆಳವಣಿಗೆ ಬೆನ್ನಲ್ಲೇ ಜಾಮರ್‌ಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಬದಲು, ಜೈಲಿನ ಭದ್ರತಾ ಅಗತ್ಯತೆಗಳಿಗೆ ಧಕ್ಕೆಯಾಗದಂತೆ ಹಾಗೂ ಸುತ್ತಮುತ್ತಲಿನ ನಿವಾಸಿಗಳ ಸಂಪರ್ಕ ಸಮಸ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಾಂತ್ರಿಕವಾಗಿ ಜಾಮರ್‌ಗಳ ಸಾಮರ್ಥ್ಯವನ್ನು ಹೊಂದಾಣಿಕೆ ಮಾಡುವ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



