ರಾಜ್ಯ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ಬೆಂಗಳೂರಿನ ಮಹಿಳಾ ಟೆಕ್ಕಿ ಸಾವು; Video

ಮಂಡ್ಯ ಕೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ಬೆಂಗಳೂರಿನ ಮಹಿಳಾ ಟೆಕ್ಕಿ ಸಾವು; Video
ಮಂಡ್ಯದಲ್ಲಿ ಭೀಕರ ಅಪಘಾತ
Published On :

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಫ್ಲೈಓವರ್‌ನಿಂದ ಕಾರೊಂದು ಕೆಳಗೆ ಬಿದ್ದು ಬೆಂಗಳೂರಿನ 32 ವರ್ಷದ ಟೆಕ್ಕಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತರನ್ನು ಬೆಂಗಳೂರಿನ ಟೆಕ್ಕಿ ಅಂಜನಾ (32) ಎಂದು ಗುರುತಿಸಲಾಗಿದ್ದು, ಮಂಡ್ಯ ಕೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಪೊಲೀಸರ ಪ್ರಕಾರ, ಕಾರು ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿತ್ತು. ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಫ್ಲೈಓವರ್‌ನಿಂದ ಹಾರಿ ಕೆಳಗಿದ್ದ ಅಂಡರ್‌ಪಾಸ್‌ಗೆ ಬಿದ್ದಿದೆ.

ಅಪಘಾತದ ತೀವ್ರತೆಗೆ ಕಾರಿನ ಕಿಟಕಿಯಿಂದ ಅಂಜನಾ ಹೊರಗೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಕಾರಿನಲ್ಲಿದ್ದ ಅವರ ಪತಿ ಹರೀಶ್ ಹಾಗೂ ಚಾಲಕ ನಿತಿನ್ ಕೂಡ ಗಾಯಗೊಂಡಿದ್ದಾರೆ. ಮೂವರನ್ನೂ ತಕ್ಷಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಜನಾ ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಅಂಜನಾ ಅವರು ಪತಿಯೊಂದಿಗೆ ಮೈಸೂರಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಡ್ಯ ಕೇಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.