ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: 19 ವರ್ಷದ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ..!
ಅಪಘಾತದ ರಭಸಕ್ಕೆ ಭರತ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರು ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು.

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದ ಬಳಿಕ ಮೆದುಳು ನಿಷ್ಕ್ರಿಯಗೊಂಡಿದ್ದ 19 ವರ್ಷದ ಯುವಕನ ಅಂಗಾಂಗಗಳನ್ನು ಆತನ ಪೋಷಕರು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಮೈಸೂರು ಜಿಲ್ಲೆಯ ಮೂಡಲಹುಂಡಿ ಗ್ರಾಮದ ಶಿವಮಾಡು ಮತ್ತು ಲಕ್ಷ್ಮಮ್ಮ ದಂಪತಿಯ ಏಕೈಕ ಪುತ್ರ ಭರತ್ ಕುಮಾರ್ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು.
ಸೆಪ್ಟೆಂಬರ್ 8ರ ಮಧ್ಯಾಹ್ನ ಮೈಸೂರಿನಿಂದ ತಮ್ಮ ಗ್ರಾಮದತ್ತ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಮೈಸೂರು-ಬನ್ನೂರು ರಸ್ತೆಯ ತಂತಿಗುಳ್ಳು ಸಮೀಪದ ತಿರುವಿನಲ್ಲಿ ಮಳವಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಭರತ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರು ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತೀವ್ರ ನಿಗಾ ಘಟಕಕ್ಕೆ ದಾಖಲಿಸಿದರು.
ಬಳಿಕ ಭರತ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಮೊದಲ ದಿನವೇ ಪೋಷಕರಿಗೆ ತಿಳಿಸಿದ್ದರು. ಆದರೂ ಮಗ ಚೇತರಿಸಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬದವರು ಒಂದು ವಾರದವರೆಗೆ ಚಿಕಿತ್ಸೆ ಮುಂದುವರಿಸಿದರು.
ಯಾವುದೇ ಸುಧಾರಣೆ ಕಂಡುಬಾರದ ಹಿನ್ನೆಲೆಯಲ್ಲಿ ವೈದ್ಯರು ಹಾಗೂ ಹಿತೈಷಿಗಳೊಂದಿಗೆ ಸಮಾಲೋಚಿಸಿದ ಬಳಿಕ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು.
ಬಳಿಕ ಅಂಗಾಂಗಗಳನ್ನು ಹೊರತೆಗೆಯುವ ಪ್ರಕ್ರಿಯೆ ನಡೆಸಿ, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ನಂತರ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶವಾಗಾರಕ್ಕೆ ಕೊಂಡೊಯ್ಯಲಾಯಿತು.
ಬಳಿಕ ಮೂಡಲಹುಂಡಿಯ ಕುಟುಂಬದ ಜಮೀನಿನಲ್ಲಿ ಸಂಬಂಧಿಕರು, ಸ್ನೇಹಿತರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಪಘಾತಕ್ಕೆ ಸಂಬಂಧಿಸಿದಂತೆ ಅರಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



