ಶಾಲೆಗಳಿಗೆ ದಸರಾ ರಜೆ ಘೋಷಿಸಿದ ಶಿಕ್ಷಣ ಇಲಾಖೆ! ಬರೋಬ್ಬರಿ 19 ದಿನ Holiday; ಯಾವಾಗ ಆರಂಭ?
ರಾಜ್ಯದ ಲಕ್ಷಾಂತರ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಇಲ್ಲಿದೆ ಸುದ್ದಿ. 2026-27 ನೇ ಶೈಕ್ಷಣಿಕ ವರ್ಷದ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಿಸಿದ್ದು ಈ ಬಾರಿ ಬರೋಬ್ಬರಿ 19 ದಿನಗಳ ಕಾಲ ಬಂಪರ್ ರಜೆ ಸಿಗಲಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ರಾಜ್ಯದ ಲಕ್ಷಾಂತರ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಇಲ್ಲಿದೆ ಸುದ್ದಿ. 2026-27 ನೇ ಶೈಕ್ಷಣಿಕ ವರ್ಷದ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಿಸಿದ್ದು ಈ ಬಾರಿ ಬರೋಬ್ಬರಿ 19 ದಿನಗಳ ಕಾಲ ಬಂಪರ್ ರಜೆ ಸಿಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಬಂಪರ್ ರಜೆ ಅನ್ವಯವಾಗುತ್ತದೆ. ಆ ಕುರಿತ ವರದಿ ಇಲ್ಲಿದೆ:
ಯಾವಾಗಿನಿಂದ ರಜೆ?
ಸಾರ್ವಜನಿಕ ಶಿಕ್ಷಣ ಇಲಾಖೆಯ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ, ಅಕ್ಟೋಬರ್ 3, 2026 ಶನಿವಾರ ರಜೆ ಆರಂಭವಾಗುತ್ತದೆ. ಇನ್ನು, ಅಕ್ಟೋಬರ್ 21ರ ಬುಧವಾರದ ವಿಜಯದಶಮಿಯಂದು ರಜೆ ಮುಕ್ತಾಯವಾಗುವುದರೊಂದಿಗೆ, ಅಕ್ಟೋಬರ್ 22ರ ಗುರುವಾರದಂದು ಶಾಲೆಗಳು ಪುನರಾರಂಭಗೊಳ್ಳುತ್ತದೆ. ಅದರಲ್ಲೂ, ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ಸಾರ್ವತ್ರಿಕ ರಜೆ ಇರಲಿದ್ದು, ಅದರ ಮರುದಿನದಿಂದಲೇ (ಅಕ್ಟೋಬರ್ 3) ಅಧಿಕೃತವಾಗಿ ದಸರಾ ರಜೆಗಳು ಆರಂಭವಾಗುವುದರಿಂದ ಮಕ್ಕಳಿಗೆ ಸತತವಾಗಿ ಹಬ್ಬದ ರಜೆಯನ್ನು ಸವಿಯುವ ಸುವರ್ಣ ಅವಕಾಶ ಸಿಕ್ಕಂತಾಗಿದೆ.
ಮುಂದುವರೆದು, ಈ ಶೈಕ್ಷಣಿಕ ವರ್ಷದ 2 ನೇ ಅವಧಿಯು ಅಕ್ಟೋಬರ್ 22, 2026 ರಿಂದ ಏಪ್ರಿಲ್ 10, 2027 ರವರೆಗೆ ಇರಳಿದ್ದು, ಏಪ್ರಿಲ್ 11, 2027 ರಿಂದ ಬೇಸಿಗೆ ರಜೆ ಪ್ರಾರಂಭವಾಗಲಿದೆ.
ಏತನ್ಮಧ್ಯೆ, ಜಿಲ್ಲೆಯ ಸ್ಥಳೀಯ ಹವಾಮಾನ ಅಥವಾ ಅಗತ್ಯಕ್ಕೆ ಅನುಗುಣವಾಗಿ ರಜಾ ದಿನಗಳಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡುವ ಅಧಿಕಾರವನ್ನು ಆಯಾ ಜಿಲ್ಲಾ ಉಪನಿರ್ದೇಶಕರು ಹೊಂದಿರುವುದರಿಂದ ಬದಲಾವಣೆ ಮಾಡಬಹುದಾಗಿದೆ. ಒಟ್ಟಾರೆಯಾಗಿ, ಶಿಕ್ಷಣ ಇಲಾಖೆಯ ಪ್ರಕಟಣೆಯಿಂದಾಗಿ ಹಬ್ಬದ ಆಚರಣೆ ಹಾಗೂ ಪ್ರವಾಸಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿರುವ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಸಖತ್ ಖುಷಿ ತಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



