ಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರು
ಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು ಹೊಡೆದ ಹಿಂದೂ ಮಹಾಸಭಾ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಶುಕ್ರವಾರ ಗಣೇಶ ಶೋಭಾಯಾತ್ರೆ ನಡೆಸಿದೆ.
ಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.
ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವಿರುದ್ಧ ಮೈಸೂರು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ಮೆರವಣಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಷ್ಟೇ ಅಲ್ಲ ಮೆರವಣಿಗೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಕಾಂಗ್ರೆಸ್ ನಿಯೋಗ ಶನಿವಾರ ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ದೂರು ನೀಡಿದೆ.
ಮೆರವಣಿಗೆ ಆಯೋಜಕರು ನಿಗದಿತ ಸಮಯದಲ್ಲಿ ಕಾರ್ಯಕ್ರಮ ಮುಗಿಸಿಲ್ಲ. ಇನ್ನು ಮೆರವಣಿಗೆಯಲ್ಲಿ ಪಾಲ್ಗೊಂಡ ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ಎಫ್ಐಆರ್ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಕಾಂಗ್ರೆಸ್ ದೂರು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



