ವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಬಂಧಿತ ಕೈದಿಯನ್ನು ಬಸವರಾಜ್ ಪಾಟೀಲ್ ಎಂದು ಗುರುತಿಸಲಾಗಿದೆ. 12 ವರ್ಷಗಳ ಹಿಂದೆ ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಬಸವರಾಜ್ ಪಾಟೀಲ್ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದನು. ಇದೀಗ ವಿಜಯಪುರ ಜಿಲ್ಲಾ ಪೊಲೀಸ್ ಪಡೆ ಕೈದಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯಲ್ಲಿ ಗ್ರಾಮವೊಂದರಲ್ಲಿ ಗುರುತು ಬದಲಿಸಿಕೊಂಡು ಬದುಕುತ್ತಿದ್ದ ಕೈದಿ ಬಸವರಾಜ್ ಪಾಟೀಲ್‌ನನ್ನು ಫಿಂಗರ್‌ಪ್ರಿಂಟ್ ಸಹಾಯದಿಂದ ಪತ್ತೆ ಹಚ್ಚಿ ಸೆರೆಹಿಡಿಯಲಾಗಿದೆ.
ಬಾಗಲಕೋಟೆಯಲ್ಲಿ ಕೃಷಿ ಅಧಿಕಾರಿಯೊಬ್ಬರನ್ನು 2009ರಲ್ಲಿ ಹನಿಟ್ರ್ಯಾಪ್ ನಡೆಸಿ ನಂತರ ಆತನನ್ನು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬಸವರಾಜ್ ಪಾಟೀಲ್‌ಗೆ ಜೀವಾವಧಿ ಶಿಕ್ಷೆಯಾಗಿತ್ತು. 2014ರಲ್ಲಿ ಅನಾರೋಗ್ಯದ ನೆಪ ಹೇಳಿ ಜಿಲ್ಲಾಸ್ಪತ್ರೆಗೆ ಸೇರಿದ್ದಾಗ ಪೊಲೀಸರ ಕಣ್ಣು ತಪ್ಪಿಸಿ ಅಲ್ಲಿಂದ ಪರಾರಿಯಾಗಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



