ಪ್ರತಾಪ್ ಸಿಂಹ ಮೇಲೆ FIR ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಕೈ ಹಾಕಿದೆ: ವಿಜಯೇಂದ್ರ
ಇದು ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ.

ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಿರುವ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ನಡೆ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವಂತಿದೆ ಎಂದು ಅವರು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲಲಿ ಪೋಸ್ಟ್ ಮಾಡಿರುವ ಅವರು, ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿಯ ವರ್ತನೆಯಿಂದ ಉದ್ಭವಿಸಿದ ಪರಿಸ್ಥಿತಿಗೆಸರ್ಕಾರವೇ ಪರೋಕ್ಷವಾಗಿ ಪ್ರಚೋದನೆ ನೀಡಿದಂತಾಗಿದೆ ಎಂದು ಆರೋಪಿಸಿದ್ದಾರೆ.
ಗಣಪತಿ ವಿಸರ್ಜನಾ ಶೋಭಾಯಾತ್ರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ, ಶಾಂತಿಗೆ ಭಂಗವಾಗದ ರೀತಿಯಲ್ಲಿ ಯಶಸ್ವಿಯಾಗಿ ನಡೆದಿದೆ. ಆದರೆ, ಗಾಯದ ಮೇಲೆ ಬರೆ ಎಳೆದಂತೆ, ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣಕ್ಕೆ ಕೈ ಹಾಕಿದೆ.
ಇದು ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ. ಕೂಡಲೇ ಸರ್ಕಾರ ಪ್ರತಾಪ್ ಸಿಂಹ ಅವರ ಮೇಲೆ ದಾಖಲಿಸಿರುವ FIR ಅನ್ನು ರದ್ದುಗೊಳಿಸಿ ಸರ್ಕಾರ ವಿವೇಕ ಮೆರೆಯಲಿ.ಎಂದಪ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



