ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!
ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಗಲ್ಲಿಯೊಂದರ ಶೆಡ್‌ವೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಅಗ್ನಿ ದುರಂತದ ಕೆಲ ದಿನಗಳ ನಂತರ ಲಭ್ಯವಾದ CCTV ದೃಶ್ಯಾವಳಿಯು, ಈ ದುರಂತಕ್ಕೆ ಹೊಸ ತಿರುವು ಕೊಟ್ಟಿದೆ.

ಬೆಳಗಾವಿ: ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಗಲ್ಲಿಯೊಂದರ ಶೆಡ್‌ವೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಅಗ್ನಿ ದುರಂತದ ಕೆಲ ದಿನಗಳ ನಂತರ ಲಭ್ಯವಾದ CCTV ದೃಶ್ಯಾವಳಿಯು, ಈ ದುರಂತಕ್ಕೆ ಹೊಸ ತಿರುವು ಕೊಟ್ಟಿದೆ. TNIE ಜೊತೆ ಮಾತನಾಡಿದ ಬೆಳಗಾವಿ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಮ್ ಅವರು, ಪ್ರಕರಣದಲ್ಲಿನ ಸಂಭಾವ್ಯ ತಿರುವಿನ ವಿವರಗಳನ್ನು ಬಹಿರಂಗಪಡಿಸಲಿಲ್ಲ. ಆದರೂ ತನಿಖೆಯ ವೇಳೆ ಪೊಲೀಸರಿಗೆ ಪ್ರಮುಖ ಸುಳಿವುಗಳು ಸಿಕ್ಕಿವೆ. ಮುಂದಿನ ಕೆಲವೇ ದಿನಗಳಲ್ಲಿ ಪ್ರಕರಣವನ್ನು ಭೇದಿಸುತ್ತೇವೆ ಎಂದು ಹೇಳಿದರು.
ದಾಮೋನೆ ಕುಟುಂಬದ ಆರು ಸದಸ್ಯರು ಬೆಂಕಿಗೆ ಆಹುತಿಯಾದ ಶೆಡ್‌ನ ಸುತ್ತಮುತ್ತಲಿನ ಗಲ್ಲಿಯ ಹಲವಾರು CCTV ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದು ಸಾವಿಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ CCTV ದೃಶ್ಯಾವಳಿಯಲ್ಲಿ ಸೆಪ್ಟೆಂಬರ್ 15ರಂದು ನಸುಕಿನ ಜಾವ 2 ಗಂಟೆಗೆ ಬೆಂಕಿ ಕಾಣಿಸಿಕೊಳ್ಳುವ ಎರಡು ನಿಮಿಷಗಳ ಮೊದಲು ಅಪರಿಚಿತ ವ್ಯಕ್ತಿಯೊಬ್ಬ ಕೈಯಲ್ಲಿ ಬಕೆಟ್ ಹಿಡಿದುಕೊಂಡು ಆ ಶೆಡ್‌ನತ್ತ ಅನುಮಾನಾಸ್ಪದವಾಗಿ ನಡೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದೆ. ಕೆಲ ನಿಮಿಷಗಳಲ್ಲೇ ಬಕೆಟ್ ಬಿಟ್ಟು ಓಡಿ ಹೋಗುತ್ತಿರುವ ದೃಶ್ಯಗಳು ಈ ಘಟನೆಯು ಉದ್ದೇಶಪೂರ್ವಕ ಕೃತ್ಯವೇ ಎಂಬ ಕೋನದಲ್ಲಿ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಆ ವ್ಯಕ್ತಿ ಅಲ್ಲಿಂದ ತೆರಳಿದ ಎರಡು ನಿಮಿಷಗಳಲ್ಲೇ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ಮನೆಯ ಸಮೀಪವಿದ್ದ ಆ ಎರಡು ನಿಮಿಷಗಳಲ್ಲಿ ಆ ವ್ಯಕ್ತಿ ಏನು ಮಾಡಿದನು? ಆತ ಹೊತ್ತೊಯ್ಯುತ್ತಿದ್ದ ಬಕೆಟ್‌ನಲ್ಲಿ ಏನಿದ್ದಿರಬಹುದು? ಮತ್ತು ಆತ ಅದನ್ನು ಏಕೆ ಅಲ್ಲಿ ಬಿಟ್ಟುಹೋದ? ಎಂಬಂತಹ ಹಲವಾರು ಪ್ರಶ್ನೆಗಳನ್ನು ಈ CCTV ದೃಶ್ಯಾವಳಿಯು ತನಿಖಾಧಿಕಾರಿಗಳ ಮುಂದೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದರು.
ಕುಟುಂಬದ ಆರು ಸದಸ್ಯರ ಸಾವಿನಲ್ಲಿ ಆ ಅಪರಿಚಿತ ವ್ಯಕ್ತಿಗೆ ಏನಾದರೂ ಪಾತ್ರವಿದೆಯೇ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಹಾಗೂ ಆತನನ್ನು ಗುರುತಿಸಿ ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಕಿ ಆಕಸ್ಮಿಕವಾಗಿ ಸಂಭವಿಸಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಹಚ್ಚಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ದೃಶ್ಯಾವಳಿಗಳು ಮತ್ತು ಲಭ್ಯವಿರುವ ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



