ಗದಗ ತಾಲೂಕು ಬರ ಪೀಡಿತ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ ಪಾಟೀಲ ಎಚ್ಚರಿಕೆ; Video
ನಾನು ರೈತ ಪರ ಇದ್ದವನು. ರೈತ ಕುಟುಂಬದವನು. ರೈತರ ಪರಿಸ್ಥಿತಿ ಬಗ್ಗೆ ನನಗೆ ಅರಿವಿದೆ. ಮೂರು ದಿನದಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಲು ಏನು ಪ್ರಯತ್ನ ಬೇಕು ಮಾಡುತ್ತೇನೆ.

ಗದಗ: ಅಕ್ಟೋಬರ್ 10ರೊಳಗಾಗಿ ಸರಕಾರ ಗದಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ ಅವರು ತಮ್ಮ ಸರ್ಕಾರದ ವಿರುದ್ಧವೇ ಎಚ್ಚರಿಕೆ ನೀಡಿದರು.
ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಬಳಿ ಕಾರವಾರ-ಕೈಗಾ ಮತ್ತು ಗದಗ-ಇಳಕಲ್ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸುತ್ತಿದ್ದ ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ತಾಲೂಕನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಪಾಟೀಲ್, ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಮಾಡಿದ್ದೇವು. ಬರಪೀಡಿದ ಪ್ರದೇಶವೆಂದು ಸ್ಪಷ್ಟವಾದ ಚಿತ್ರಣ ನಮ್ಮದಾಗಿತ್ತು. ಅಧಿಕಾರಿಗಳ ವರದಿ ನಂತರ ಸಿಎಂ ಅತ್ಯಂತ ಬರ ಬಿದ್ದಿರುವ ಜಿಲ್ಲೆಯೆಂದು ಬಂದಿದ್ದರು. ಸಿಎಂ ಡಿ.ಕೆ. ಶಿವಕುಮಾರ್ ಅವರು ಕದಾಂಪೂರದಿಂದ ಕುರ್ತಕೋಟಿವರೆಗೆ ಬೆಳೆ ವೀಕ್ಷಣೆ ಮಾಡಿದ್ದರು. ಇಷ್ಟಾದರೂ ಬರ ಪೀಡಿತ ತಾಲೂಕೆಂದು ಘೋಷಣೆ ಮಾಡಿಲ್ಲ. ರೈತರು ರೊಚ್ಚಿಗೆದ್ದು ಹೋರಾಟ ಮಾಡುತ್ತಿದ್ದಾರೆ. ಗದಗ ತಾಲೂಕಿನಲ್ಲಿಯೇ ಶೇ. 49 ರಷ್ಟು ಮಳೆ ಕೊರತೆ ಆಗಿದೆ. ಬರ ಪೀಡಿತ ಪ್ರದೇಶವೆಂದು ಯಾಕೇ ಘೋಷಣೆ ಮಾಡಲಿಲ್ಲ? ಬರ ಘೋಷಣೆ ಮಾಡಲು ಅಡ್ಡಿ ಆದವರು ಯಾರು? ಅನ್ಯಾಯ, ಮೋಸ ಸಹಿಸೋದಕ್ಕೆ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ರೈತ ಪರ ಇದ್ದವನು. ರೈತ ಕುಟುಂಬದವನು. ರೈತರ ಪರಿಸ್ಥಿತಿ ಬಗ್ಗೆ ನನಗೆ ಅರಿವಿದೆ. ಮೂರು ದಿನದಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಲು ಏನು ಪ್ರಯತ್ನ ಬೇಕು ಮಾಡುತ್ತೇನೆ. ಅದು ಸಾಧ್ಯವಾಗದೆ ಹೋದರೆ ಅಕ್ಟೋಬರ್ 10 ಗಡುವನ್ನು ಶಾಸನ ಸಭೆಯ ಮೂಲಕ ಸರ್ಕಾರಕ್ಕೆ ಕೊಡುತ್ತೇನೆ ಎಂದು ಪುನರುಚ್ಛರಿಸಿದರು.
ಉತ್ತರ ಕರ್ನಾಟಕದ ಬರ ಪರಿಸ್ಥಿತಿಯ ಕುರಿತು ಮಾತನಾಡುತ್ತಾ, "ಉತ್ತರ ಕರ್ನಾಟಕದಲ್ಲಿ 73 ತಾಲೂಕುಗಳಿವೆ, ಅದರಲ್ಲಿ 27 ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ. ಆ ಎಲ್ಲಾ ತಾಲೂಕುಗಳನ್ನು ಕೂಡಲೇ ಪಟ್ಟಿಯಲ್ಲಿ ಸೇರಿಸಬೇಕು. ಇದರಲ್ಲಿ ಅನಗತ್ಯ ರಾಜಕೀಯವನ್ನು ಬೆರೆಸಬಾರದು. ಇದು ರಾಜಕೀಯ ಪ್ರೇರಿತವಾಗಿದ್ದರೆ, ನಾನು ಅದನ್ನು ಭೇದಿಸಬಲ್ಲೆ" ಎಂದರು.
ಗದಗ ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಎಲ್ಲ ರೀತಿಯಿಂದಲು ವಿವರಿಸಿದರು. ಸರ್ಕಾರ ಹಾಗೂ ಆಡಳಿತ ವ್ಯವಸ್ಥೆ ನಿರ್ಲಕ್ಷ ವಹಿಸಿರುವುದು ಬೇಸರದ ಸಂಗತಿಯಾಗಿದೆ. ಗದಗ ಜಿಲ್ಲೆಯ ಬರಗಾಲದ ಕುರಿತು ಹಿರಿಯ ರಾಜಕಾರಣಿಯಾಗಿ, ಹಿರಿಯ ಶಾಸಕನಾಗಿ ಮನವಿ ಮಾಡಿಕೊಳುತ್ತೇನೆ.
ನೈಋತ್ಯ ಮುಂಗಾರು ವೈಫಲ್ಯ ಮತ್ತು 'ಸೂಪರ್ ಎಲ್ ನಿನೋ' (Super El Nino) ಪರಿಣಾಮವಾಗಿ ಹೆಸರು ಕಾಳು, ಶೇಂಗಾ, ಹತ್ತಿ, ಈರುಳ್ಳಿ ಮತ್ತು ಇತರ ಬೆಳೆಗಳ ಮೇಲೆ ಆಗಿರುವ ಪರಿಣಾಮದ ಕುರಿತು ಪಾಟೀಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮೂರು ಪುಟಗಳ ಪತ್ರ ಬರೆದಿದ್ದಾರೆ. ಗದಗ ಜಿಲ್ಲೆಯಲ್ಲಿ ಕೇವಲ ಶೇ. 50ರಷ್ಟು ಮಳೆಯಾಗಿದ್ದು, ಇದರಿಂದ ಶೇ. 86ರಷ್ಟು ಬೆಳೆ ನಷ್ಟವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



