ರಾಜ್ಯ

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದೇನು?

ಧರ್ಮಸ್ಥಳ ಕ್ಷೇತ್ರದ ಪರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮರು ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿ ಅಂತ ಆಶಿಸಿದ್ದಾರೆ.

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದೇನು?
ಶ್ರೀ ಕ್ಷೇತ್ರ ಧರ್ಮಸ್ಥಳ
Published On :

ಮಂಗಳೂರು: ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಮರು ತನಿಖೆಗೆ ಒಪ್ಪಿಸಿರುವ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ.

ಧರ್ಮಸ್ಥಳ ಕ್ಷೇತ್ರದ ಪರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮರು ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿ ಅಂತ ಆಶಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯವು ಕುಮಾರಿ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Story image

ಕುಮಾರಿ ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ ಎಂದು ತಿಳಿಸಿರುವ ಆಡಳಿತ ಮಂಡಳಿ, ಇದೀಗ ನ್ಯಾಯಾಲಯ ಆದೇಶಿಸಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಇಡೀ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ಆಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.