ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ನಾಲ್ವರಿಗೆ ಗಂಭೀರ ಗಾಯ
ಮೂರು ಬೈಕ್ ಗಳಲ್ಲಿ ಮಾಸ್ಕ್ ಧರಿಸಿ ಬಂದ ಆರೇಳು ಜನ ದುಷ್ಕರ್ಮಿಗಳ ತಂಡ, ನಡುರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಮಾರಕಾಸ್ತ್ರಗಳಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ಮುಖ್ಯ ರಸ್ತೆಯ ಅರಹಳ್ಳಿ ಗೇಟ್ ಬಳಿಯ ಎರಡು ಸ್ಥಳಗಳಲ್ಲಿ ಭಾನುವಾರ ರಾತ್ರಿ 9 ಗಂಟೆಗೆ ಈ ಘಟನೆಗಳು ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ.
ಮೂರು ಬೈಕ್ ಗಳಲ್ಲಿ ಮಾಸ್ಕ್ ಧರಿಸಿ ಬಂದ ಆರೇಳು ಜನ ದುಷ್ಕರ್ಮಿಗಳ ತಂಡ, ನಡುರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.
ಹಲ್ಲೆಕೋರರು ಮೊದಲು ರಸ್ತೆಬದಿಯಲ್ಲಿ ನಿಂತಿದ್ದ ಕಿರಣ್ ಮತ್ತು ಅವನ ಸ್ನೇಹಿತನ ಮೇಲೆ ದಾಳಿ ಮಾಡಿದ್ದು, ಕೆಲ ನಿಮಿಷಗಳ ನಂತರ ಮೀನು ಅಂಗಡಿಯತ್ತ ಸಾಗಿದ್ದಾರೆ. ಅಲ್ಲಿ ಅವರು ಇತರ ಇಬ್ಬರ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ನಾಲ್ವರು ಪುರುಷರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಮೂವರು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ, ಆದರೆ ಒಬ್ಬ ವ್ಯಕ್ತಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ(ನೈಋತ್ಯ) ಎಸ್ ಕೆ ಸೌಮ್ಯಲತಾ ಅವರು ತಿಳಿಸಿದ್ದಾರೆ.
ಡಿಸಿಪಿ ಘಟನಾ ಸ್ಥಳಕ್ಕೆ ಸುಬ್ರಮಣ್ಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕಾರಣವಿಲ್ಲದೆ ಸಾರ್ವಜನಿಕರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಈಗಾಗಲೇ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ. ಆರೋಪಿಗಳ ಶೀಘ್ರ ಬಂಧನಕ್ಕಾಗಿ ಸುಬ್ರಮಣ್ಯಪುರ ಠಾಣೆ ಪೊಲೀಸರ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನೈರುತ್ಯ ವಿಭಾಗದ ಡಿಸಿಪಿ ಡಾ ಎಸ್.ಕೆ. ಸೌಮ್ಯಲತಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



