ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರೈತರು ಸಾವು!
ಮೃತರನ್ನು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದ ಲಕ್ಷ್ಮಿ ಬಸಯ್ಯ ಗುತ್ತೇದಾರ (45) ಹಾಗೂ ಸೈಜಾದುಬೀ ಘತ್ರು ಸಾಬ್ (60) ಎಂದು ಗುರುತಿಸಲಾಗಿದೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿ ಮೂವರು ರೈತರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದ ಲಕ್ಷ್ಮಿ ಬಸಯ್ಯ ಗುತ್ತೇದಾರ (45) ಹಾಗೂ ಸೈಜಾದುಬೀ ಘತ್ರು ಸಾಬ್ (60) ಎಂದು ಗುರುತಿಸಲಾಗಿದೆ.
ಬಸಯ್ಯ ಗುತ್ತೇದಾರ ಹೊಲದಲ್ಲಿ ಮಹಿಳೆಯರು ತೊಗರಿ ಬೆಳೆಯ ಕಳೆ ಕೀಳುವಾಗ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಸುರಿದ ಮಳೆಯಿಂದ ರಕ್ಷಣೆ ಪಡೆಯಲು ಗಿಡದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇನ್ನುಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದಲ್ಲದೇ ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಶ್ರೀರಂಗಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸಿಡಿಲು ಬಡಿದು ಮದ್ಲೂರು ಗ್ರಾಮದ ರೈತ ಕೇದಾರಪ್ಪ ಮಲ್ಲಪ್ಪ ಗುರ್ಲಹೊಸೂರ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



