ಕೊಪ್ಪಳ: ಕೋತಿ ದಾಳಿಗೆ 91 ವರ್ಷದ ವೃದ್ಧೆ ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ; Video
ನಜಮುನಿಸಾ ಬೇಗಂ (91ವ) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗಂ ಮನೆ ಮುಂದೆ ನಿಂತುಕೊಂಡಿದ್ದರು.

ಕೊಪ್ಪಳ: ಕೋತಿ ಏಕಾಏಕಿ ದಾಳಿ ಮಾಡಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲಿಯೇ ವೃದ್ಧೆ ಮೃತಪಟ್ಟಿರುವ ಘಟನೆ ಕೊಪ್ಪಳದ ಬಿ.ಟಿ ಪಾಟೀಲ್ ನಗರದಲ್ಲಿ ನಡೆದಿದೆ.
ನಜಮುನಿಸಾ ಬೇಗಂ (91ವ) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗಂ ಮನೆ ಮುಂದೆ ನಿಂತುಕೊಂಡಿದ್ದರು. ಈ ವೇಳೆ ನಜಮುನಿಸಾ ಬೇಗಂ ಮೇಲೆ ಕೋತಿ ದಾಳಿ ನಡೆಸಿ ತಳ್ಳಿದೆ. ನಜಮುನಿಸಾ ಬೇಗಂ ಕೆಳಗೆ ಬಿದ್ದರು. ಬಿದ್ದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಜಮುನಿಸಾ ಬೇಗಂ ಅವರನ್ನು ಎಬ್ಬಿಸಲು ಬಂದ ಮಹಿಳೆಯ ಮೇಲೂ ಕೋತಿ ದಾಳಿ ನಡೆಸಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Video: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ: ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


