ನೆಲಮಂಗಲ: ರಸ್ತೆ ಅಪಘಾತ, ಲಾರಿ ಚಕ್ರಕ್ಕೆ ಸಿಲುಕಿ ಯೋಧ ಸಾವು!
ಮಿಲಿಟರಿ ಕ್ವಾಟ್ರಸ್‌ಗೆ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಲಕ್ಕೂರು ಬಳಿ ಅಪಘಾತ ನಡೆದಿದೆ.

ನೆಲಮಂಗಲ: ರಸ್ತೆ ಅಪಘಾತದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿ ಸಂಭವಿಸಿದೆ. ಮೃತರನ್ನು 35 ವರ್ಷದ ಪ್ರಿನ್ಸಿಪಲ್ ಸಿಂಗ್ ಎಂದು ಗುರುತಿಸಲಾಗಿದೆ.
ಮಿಲಿಟರಿ ಕ್ವಾಟ್ರಸ್‌ಗೆ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಲಕ್ಕೂರು ಬಳಿ ಅಪಘಾತ ನಡೆದಿದೆ. ಲಾರಿ ಚಕ್ರಕ್ಕೆ ಸಿಲುಕಿ ಯೋಧ ಸಾವನ್ನಪ್ಪಿದ್ದಾರೆ.
ಪಂಜಾಬ್ ಮೂಲದ ಸಿಂಗ್, ದಾಬಸ್ ಪೇಟೆಯಲ್ಲಿ ಸಿಐಎಸ್ಎಫ್ ಕ್ವಾಟ್ರಸ್‌ನಲ್ಲಿ ವಾಸವಿದ್ದರು. ಸಿಐಎಸ್‌ಎಫ್‌ನಲ್ಲಿ ಕಾನ್‌ಸ್ಟೇಬಲ್ ರ‍್ಯಾಂಕ್‌ನ ಯೋಧರಾಗಿದ್ದರು. ಇಲಾಖೆಗೆ ಎಲೆಕ್ಟ್ರಿಕ್ ಸಾಮಗ್ರಿ ತರಲು ದಾಬಸ್ ಪೇಟೆಗೆ ಪ್ರಿನ್ಸಿಪಲ್ ಸಿಂಗ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯರಭಸಕ್ಕೆ ಸ್ಥಳದಲ್ಲೇ ಲಾರಿ ಚಕ್ರಕ್ಕೆ ಸಿಲುಕಿದ ಯೋಧ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಗಾರಕ್ಕೆ ಮೃತದೇಹ ರವಾನೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


