ಕಸ್ತೂರಿರಂಗನ್ ವರದಿ ಜಾರಿಯಾದರೆ ರಕ್ತಪಾತ; ರಾಜ್ಯ ಸರ್ಕಾರಕ್ಕೆ ಆರಗ ಜ್ಞಾನೇಂದ್ರ ಎಚ್ಚರಿಕೆ
ವರದಿ ಜಾರಿಗೊಳಿಸಿದರೆ ರಕ್ತಪಾತವಾಗಲಿದೆ” ಎಂದ ಅವರು, ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕರೆದಿರುವ ಸಭೆಗಳಿಗೆ ರೈತರು ಹಾಗೂ ಇತರ ಸಂಬಂಧಿತರು ಹೆಚ್ಚಿನ ಸಂಖ್ಯೆಯಲ್ಲಿ ಆತಂಕದಿಂದ ಆಗಮಿಸುತ್ತಿರುವುದನ್ನು ಅವರು ಉಲ್ಲೇಖಿಸಿದರು.

ಬೆಂಗಳೂರು: ಕಸ್ತೂರಿರಂಗನ್ ವರದಿಯನ್ನು ಅದರ ಪ್ರಸ್ತುತ ರೂಪದಲ್ಲೇ ಜಾರಿಗೊಳಿಸಲು ಯಾವುದೇ ಪ್ರಯತ್ನ ನಡೆದರೆ ರಕ್ತವಾಗುವ ಸಾಧ್ಯತೆಗಳಿವೆ ಎಂದು ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟಗಳಲ್ಲಿ ಶತಮಾನಗಳಿಂದ ತಮ್ಮ ಜೀವನ ಹಾಗೂ ಕೃಷಿ ಪದ್ಧತಿಯನ್ನು ರೂಪಿಸಿಕೊಂಡಿರುವ ರೈತರ ಜೀವನೋಪಾಯದ ಮೇಲೆ ವರದಿ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.
“ವರದಿ ಜಾರಿಗೊಳಿಸಿದರೆ ರಕ್ತಪಾತವಾಗಲಿದೆ” ಎಂದ ಅವರು, ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕರೆದಿರುವ ಸಭೆಗಳಿಗೆ ರೈತರು ಹಾಗೂ ಇತರ ಸಂಬಂಧಿತರು ಹೆಚ್ಚಿನ ಸಂಖ್ಯೆಯಲ್ಲಿ ಆತಂಕದಿಂದ ಆಗಮಿಸುತ್ತಿರುವುದನ್ನು ಅವರು ಉಲ್ಲೇಖಿಸಿದರು. ಈ ವಿಚಾರದಲ್ಲಿ ಬಿಜೆಪಿ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸುತ್ತಿದೆ ಎಂದು ಹೇಳಿದರು.
2022ರಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ರಚಿಸಿದ್ದ ಪಶ್ಚಿಮ ಘಟ್ಟಗಳ ತಜ್ಞರ ಸಮಿತಿಯ ಅಧ್ಯಕ್ಷರಾಗಿದ್ದ ಸಂಜಯ್ ಕುಮಾರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಅಲ್ಲದೆ, ಪಶ್ಚಿಮ ಘಟ್ಟಗಳಲ್ಲಿ ವಾಸಿಸುವ ಜನರಲ್ಲಿ ಈಗ ಆತಂಕ ಮೂಡಲು ಕಾರಣವಾಗಿರುವ ಪ್ರಕ್ರಿಯೆಯನ್ನು ಆರಂಭಿಸಿದ್ದೇ ಕಾಂಗ್ರೆಸ್ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



