PSIಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಬಿಜೆಪಿ ಶಾಸಕನ ಪುತ್ರಿಗೆ ಜಾಮೀನು; ‘ಆ ಘಟನೆ ನಡೆಯಬಾರದಿತ್ತು’ ಎಂದ ಐಶ್ವರ್ಯ!
ಮಹಿಳಾ ಪೊಲೀಸ್ ಅಧಿಕಾರಿ ಬಳಿ ಕ್ಷಮೆ ಕೇಳಿದರೆ ಮಾತ್ರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿತ್ತು. ಹೀಗಾಗಿ ಐಶ್ವರ್ಯ ಗೌಡ ಅವರು ಇಂದು ವಿಡಿಯೋ ಮೂಲಕ ಪೊಲೀಸ್ ಅಧಿಕಾರಿ ಬಳಿ ಕ್ಷಮೆ ಕೇಳಿದ ನಂತರ ಜಾಮೀನು ನೀಡಲಾಗಿದೆ.

ಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಗೌಡ ಅವರಿಗೆ ಮಂಗಳವಾರ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಹಿಳಾ ಪೊಲೀಸ್ ಅಧಿಕಾರಿ ಬಳಿ ಕ್ಷಮೆ ಕೇಳಿದರೆ ಮಾತ್ರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿತ್ತು. ಹೀಗಾಗಿ ಐಶ್ವರ್ಯ ಗೌಡ ಅವರು ಇಂದು ವಿಡಿಯೋ ಮೂಲಕ ಪೊಲೀಸ್ ಅಧಿಕಾರಿ ಬಳಿ ಕ್ಷಮೆ ಕೇಳಿದ ನಂತರ ಜಾಮೀನು ನೀಡಲಾಗಿದೆ.
ಐಶ್ವರ್ಯಾ ಅವರು ಮಹಿಳಾ ಪಿಎಸ್ಐ ಸವಿತಾ ಅವರಿಗೆ ಕ್ಷಮೆ ಕೇಳಿದ್ದಾರೆ. ನ್ಯೂಸ್ ಚಾನಲ್ಗಳಲ್ಲೂ ಕ್ಷಮೆಯಾಚನೆ ಸುದ್ದಿ ಪ್ರಸಾರವಾಗಿದೆ ಎಂದು ಹೈಕೋರ್ಟ್ಗೆ ಐಶ್ವರ್ಯಾ ಪರ ವಕೀಲರಿಂದ ಮಾಹಿತಿ ನೀಡಿದ್ದು, ಆರೋಪಕ್ಕೆ ಕೇವಲ 2 ವರ್ಷದವರೆಗೆ ಮಾತ್ರ ಶಿಕ್ಷೆ ಇದೆ. ಐಶ್ವರ್ಯಾ ಹಾಗೂ ಆಕೆಯ ತಂದೆ ಈಗಾಗಲೇ ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದರು. ಇದನ್ನು ಆಲಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಐಶ್ವರ್ಯಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆ ಘಟನೆ ನಡೆಯಬಾದಿತ್ತು
ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಹೆಚ್ಚು ಜನಸಂದಣಿ ಇದ್ದಿದ್ದರಿಂದ ಹಾಗೂ ನನ್ನ ಮಕ್ಕಳಿಗೆ 'ಅಮ್ಮ' ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು ಎಂದು ಐಶ್ವರ್ಯ ವಿಡಿಯೋದಲ್ಲಿ ಹೇಳಿದ್ದಾರೆ.
ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ವೀಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ಇಂದು ಐಶ್ವರ್ಯಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ತರಾಟೆ ಬಳಿಕ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಕ್ಷಮೆಯಾಚನೆ; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


