ವಿಮೆ ವಂಚನೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರದಿಂದ SIT ರಚನೆ!
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 2(1)(u) ಅಡಿಯಲ್ಲಿ ಈ SITಯನ್ನು 'ಪೊಲೀಸ್ ಠಾಣೆ' ಎಂದು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ತನಿಖಾ ವ್ಯಾಪ್ತಿಯನ್ನು ಕಲ್ಪಿಸಲಾಗಿದೆ.

ಬೆಂಗಳೂರು: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆ ಪೂರಿತ ಕ್ಲೇಮ್‌ಗಳ ಕುರಿತು ಪ್ರಕರಣ ದಾಖಲಿಸಲು ಮತ್ತು ತ್ವರಿತ ತನಿಖೆ ನಡೆಸಲು ರಾಜ್ಯ ಸರ್ಕಾರ ಬುಧವಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಸಂದೇಹಾಸ್ಪದ ವಂಚನೆಯ ವಿಮೆ ವಂಚನೆ ಪ್ರಕರಣಗಳ ತನಿಖೆಗಾಗಿ ಮೀಸಲಾದ ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸೆಪ್ಟೆಂಬರ್ 22 ರಂದು ಗೃಹ ಇಲಾಖೆ ಹೊರಡಿಸಿದ ಸರ್ಕಾರದ ಆದೇಶದ ಪ್ರಕಾರ, ಬೆಂಗಳೂರಿನ ಸಿಟಿಆರ್‌ಎಸ್ (ಅಪರಾಧ ಮತ್ತು ತಾಂತ್ರಿಕ ಸಂಶೋಧನಾ ಸೇವೆಗಳ ವಿಭಾಗ) ನ ಪೊಲೀಸ್ ಉಪ ಮಹಾನಿರೀಕ್ಷಕರು (DIG) ಈ SITಯ ಅಧ್ಯಕ್ಷರಾಗಿರುತ್ತಾರೆ. ಇವರೊಂದಿಗೆ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ನಾಮನಿರ್ದೇಶನ ಮಾಡುವ ಒಬ್ಬ ಉಪ ಪೊಲೀಸ್ ಅಧೀಕ್ಷಕರು (ಡಿವೈಎಸ್ ಪಿ) ಹಾಗೂ ಮೂವರು ಇನ್ಸ್ ಪೆಕ್ಟರ್ ಗಳು ತಂಡದ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 2(1)(u) ಅಡಿಯಲ್ಲಿ ಈ SITಯನ್ನು 'ಪೊಲೀಸ್ ಠಾಣೆ' ಎಂದು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ತನಿಖಾ ವ್ಯಾಪ್ತಿಯನ್ನು ಕಲ್ಪಿಸಲಾಗಿದೆ. ಸದರಿ SITಯ ತನಿಖಾಧಿಕಾರಿಗಳು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 193 ರ ಅಡಿಯಲ್ಲಿ ಸಂಬಂಧಪಟ್ಟ ನ್ಯಾಯಾಲಯಗಳಿಗೆ ಅಂತಿಮ ವರದಿಗಳನ್ನು ಸಲ್ಲಿಸಲು ಅಧಿಕಾರವನ್ನು ಹೊಂದಿರುತ್ತಾರೆ ಎಂದು ಆದೇಶವು ತಿಳಿಸಿದೆ.
ಈ ವಿಶೇಷ ತನಿಖಾ ತಂಡವು (SIT) ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಅವರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ತಂಡವು ತನಿಖೆಯ ಪ್ರಗತಿಯ ಕುರಿತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಕಾನೂನು ಮತ್ತು ಸುವ್ಯವಸ್ಥೆ) ಮೂಲಕ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ಪರಿವೀಕ್ಷಕರಿಗೆ (DG & IGP) ಕಾಲಕಾಲಕ್ಕೆ ವರದಿ ಸಲ್ಲಿಸಬೇಕು ಎಂದು ಅದರಲ್ಲಿ ಹೇಳಲಾಗಿದೆ.
"ವಿಮಾ ಕಂಪನಿಗಳಿಂದ ಸಲ್ಲಿಸಲಾದ ವಂಚನೆ ಕ್ಲೇಮ್‌ಗಳಿಗೆ ಸಂಬಂಧಿಸಿದಂತೆ, ಆ ಕಂಪನಿಗಳಿಂದ ಸ್ವೀಕರಿಸಲಾದ ಎಲ್ಲಾ ದೂರುಗಳನ್ನು DG & IGP ಅವರು ಈ SITಗೆ ವರ್ಗಾಯಿಸಬೇಕು. ವಿಶೇಷ ತನಿಖಾ ತಂಡಕ್ಕೆ ಅಗತ್ಯವಿರುವ ಯಾವುದೇ ಅಧಿಕಾರಿಗಳು ಅಥವಾ ಸಿಬ್ಬಂದಿಯನ್ನು ಅಗತ್ಯವಿದ್ದಾಗ DG & IGP ಅವರು ಒದಗಿಸಬೇಕು ಎಂದು ಆದೇಶವು ತಿಳಿಸಿದೆ.
ವಿಮಾ ಕಂಪನಿಗಳಿಂದ ಸ್ವೀಕರಿಸಲಾದ ಮೋಸದ ಕ್ಲೇಮ್‌ಗಳಿಗೆ ಸಂಬಂಧಿಸಿದ ಎಲ್ಲಾ ದೂರುಗಳನ್ನು ಕೂಲಂಕಷವಾಗಿ ತನಿಖೆ ನಡೆಸಲು ಮತ್ತು ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ಪರಿವೀಕ್ಷಕರ ಮೂಲಕ ತನಿಖಾ ವರದಿಗಳನ್ನು ವಿಳಂಬವಿಲ್ಲದೆ ಸರ್ಕಾರಕ್ಕೆ ಸಲ್ಲಿಸಲು ಈ ತಂಡಕ್ಕೆ ನಿರ್ದೇಶನ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



