ರಾಜ್ಯ

ಶಾಸಕ ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ; ಬರ ಪಟ್ಟಿಗೆ ಇಂಡಿ ತಾಲೂಕು ಸೇರ್ಪಡೆ..!

ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪಟ್ಟಿಯಿಂದ ಹೊರಗಿಟ್ಟಿರುವುದನ್ನು ವಿರೋಧಿಸಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಶಾಸಕ ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ; ಬರ ಪಟ್ಟಿಗೆ ಇಂಡಿ ತಾಲೂಕು ಸೇರ್ಪಡೆ..!
ಡಿಕೆ ಶಿವಕುಮಾರ್, ಯಶವಂತರಾಯಗೌಡ ಪಾಟೀಲ್
Published On :

ಬೆಂಗಳೂರು: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ತಮ್ಮ ತಾಲೂಕುಗಳನ್ನು ಕೈಬಿಟ್ಟಿದ್ದಕ್ಕೆ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಇದೀಗ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಿದೆ.

ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪಟ್ಟಿಯಿಂದ ಹೊರಗಿಟ್ಟಿರುವುದನ್ನು ವಿರೋಧಿಸಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಹಲವು ಬಾರಿ ಮನವಿ ಮಾಡಿದರೂ ತಮ್ಮ ಕ್ಷೇತ್ರದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

‘ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದ ಯಶವಂತರಾಯಗೌಡ ಪಾಟೀಲ್ ಅವರು, ತಮ್ಮ ರಾಜೀನಾಮೆ ನಿರ್ಧಾರಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದರು. ಆದರೆ ಸ್ಪೀಕರ್ ಅವರು ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.

ಇದೇ ವಿಚಾರವಾಗಿ ವಿಧಾನಸಭೆಯಲ್ಲೂ ಚರ್ಚೆ ನಡೆದಿತ್ತು. ಇದರ ಬೆನ್ನಲ್ಲೇ ಸ್ಥಳ ಪರಿಶೀಲನೆ ಹಾಗೂ ಸತ್ಯಶೋಧನಾ ವರದಿಯನ್ನು ಆಧರಿಸಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 29 ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಈ 29 ತಾಲೂಕುಗಳಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಕೂಡ ಸೇರಿದೆ ಎಂದು ತಿಳಿದುಬಂದಿದೆ.

ಇಂಡಿ ತಾಲೂಕು ಬರಪಟ್ಟಿಗೆ ಸೇರ್ಪಡೆಯಾಗಿರುವುದು ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ರಾಜೀನಾಮೆ ಬೆಳವಣಿಗೆಯ ಬೆನ್ನಲ್ಲೇ ನಡೆದಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಆದರೆ, ಚಡಚಣ ತಾಲೂಕು ಇನ್ನೂ ಬರಪಟ್ಟಿಗೆ ಸೇರ್ಪಡೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.