ಬರಗಾಲವಿದ್ದರೂ No Worry: ಅಕ್ಟೋಬರ್ 11 ರಿಂದ 6 ದಿನ 'ಕಾವೇರಿ ಆರತಿ'ಗೆ ಸರ್ಕಾರ ರೆಡಿ; ಚಲುವರಾಯಸ್ವಾಮಿ ಮಾಹಿತಿ
ಈಗಿನ ಮುಖ್ಯಮಂತ್ರಿಯವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆರಂಭಿಸಿದ್ದ ಆರತಿಯನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಯೋಜಿಸಬೇಕು. ಡಿ-ಝೋನ್ ಭದ್ರತಾ ನಿಯಮಗಳ ಪಾಲನೆಯಾಗಬೇಕು.

ಬೆಂಗಳೂರು: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಕೆಆರ್‌ಎಸ್‌ನಲ್ಲಿ ಅಕ್ಟೋಬರ್ 11ರಿಂದ ಆರು ದಿನಗಳ ಕಾಲ ಸಂಪ್ರದಾಯಬದ್ಧ ‘ಕಾವೇರಿ ಆರತಿ’ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ವಿಕಾಸಸೌಧದಲ್ಲಿ ಬುಧವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೇ ಬಳಸಿಕೊಂಡು ಲೋಪವಿಲ್ಲದೆ ನಿರ್ವಹಿಸಬೇಕು ಎಂದು ಸೂಚಿಸಿದರು.
ಈಗಿನ ಮುಖ್ಯಮಂತ್ರಿಯವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆರಂಭಿಸಿದ್ದ ಆರತಿಯನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಯೋಜಿಸಬೇಕು. ಡಿ-ಝೋನ್ ಭದ್ರತಾ ನಿಯಮಗಳ ಪಾಲನೆಯಾಗಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದರು. ರಾಜ್ಯದಲ್ಲಿ ಬರಗಾಲ ಮತ್ತು ತಮಿಳುನಾಡು ನೀರು ಹಂಚಿಕೆ ವಿವಾದವಿದ್ದರೂ ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ಪ್ರಯತ್ನದ ಭಾಗವಾಗಿ ಕಾರ್ಯಕ್ರಮ ನಡೆಯಲಿದೆ ಎಂದರು.
ಪಾರ್ಕಿಂಗ್ ಸ್ಥಳದಿಂದ ವೇದಿಕೆವರೆಗೂ ಉಚಿತ ಬಸ್ ಸೌಲಭ್ಯ, ರಸ್ತೆ ನಿರ್ಮಾಣ, ಪ್ರಚಾರ, ಪಂಡಿತರ ನೇಮಕ, ಎಲ್‌ಇಡಿ ಪರದೆಗಳು, ಭವ್ಯ ವೇದಿಕೆ, ಧ್ವನಿ-ಬೆಳಕು ವ್ಯವಸ್ಥೆ, ವಾದ್ಯ, ಪೂಜಾ ಪರಿಕರಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯವಸ್ಥಿತವಾಗಿರಬೇಕು. ಶಿಷ್ಟಾಚಾರ ಉಲ್ಲಂಘನೆಯಾಗದಂತೆ, ಕಳೆದ ಬಾರಿಯ ಲೋಪದೋಷಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕುಎಂದು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



