ರಾಜ್ಯ

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'

ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು.

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬರ ಪರಿಹಾರ ವಿಚಾರವಾಗಿ ದೆಹಲಿಗೆ ಸರ್ವಪಕ್ಷ ನಿಯೋಗ ತೆರಳುವ ಬಗ್ಗೆ ಕೇಳಿದಾಗ, ಸರ್ವಪಕ್ಷ ನಿಯೋಗ ದೆಹಲಿಗೆ ಹೋಗಲಿದೆ, ಪ್ರಧಾನಮಂತ್ರಿಗಳ ಭೇಟಿಗೆ ಸಮಯಾವಕಾಶ ಕೇಳಿದ್ದು, ಉಪಮುಖ್ಯಮಂತ್ರಿಗಳು ಬರ ಪರಿಸ್ಥಿತಿಯ ಆಳವಾದ ಅಧ್ಯಯನ ಮಾಡಿದ್ದಾರೆ. ಈಗ ಮಧ್ಯಂತರ ಪರಿಹಾರ ನೀಡಿ, ನಂತರ ಬರ ಅಧ್ಯಯನ ಮಾಡಿ ಹೆಚ್ಚು ಪರಿಹಾರ ನೀಡಬೇಕು.

ವಿರೋಧ ಪಕ್ಷಗಳ ನಾಯಕರು ಹಾಗೂ ಸಂಸದರು ನಮಗೆ ನೆರವು ನೀಡುವ ವಿಶ್ವಾಸವಿದೆ. ಕರ್ನಾಟಕಕ್ಕೆ ನೆರವು ನೀಡಬೇಕಾಗಿರುವುದು ಪ್ರಧಾನಮಂತ್ರಿಗಳ ಕರ್ತವ್ಯ. ಬೇರೆ ರಾಜ್ಯಗಳು ಪ್ರತಿ ಯೂನಿಟ್ ಗೆ 20-22 ರೂ.ವರೆಗೆ ನೀಡಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ.

ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು. ಸಾಧ್ಯವಿರುವ ಕಡೆ ಥರ್ಮಲ್ ಕೇಂದ್ರ ಸ್ಥಾಪನೆಗೆ ಸಾಧ್ಯತೆ ಹುಡುಕಲಾಗುತ್ತಿದೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?

ಬಿಜೆಪಿಯ ಚೊಂಬು ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಸಿಎಂ, ಆರ್ಥಿಕ ಇಲಾಖೆ ಸರ್ಕಾರಕ್ಕೆ ಸಲಹೆ ನೀಡಿದೆ. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಆರ್ಥಿಕ ಇಲಾಖೆ ಎಚ್ಚರಿಕೆ ನೀಡುತ್ತದೆ.

ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಎಚ್ಚರಿಕೆ ನೀಡಿದ್ದು, ಬೇಕಾದರೆ ದಾಖಲೆ ಬಿಡುಗಡೆ ಮಾಡುತ್ತೇನೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಇದು ರಾಜಕೀಯ ಮಾಡುವಂತಹ ದೊಡ್ಡ ವಿಚಾರವಲ್ಲ. ಅವರು ನನ್ನ ರಾಜೀನಾಮೆ ಬೇಕಾದರೆ ತೆಗೆದುಕೊಳ್ಳಲಿ ಎಂದರು.

ಸತ್ತ ಆರ್ಥಿಕತೆ ಎಂದು ಬಿಜೆಪಿಯವರು ಶವಯಾತ್ರೆಗೆ ಮುಂದಾಗಿದ್ದಾರೆ ಎಂದು ಕೇಳಿದಾಗ, “ಅವರು ಮಾಡಲಿ, ಅವರ ಸರ್ಕಾರದಲ್ಲಿ ನೀರಾವರಿ ಇಲಾಖೆಯಲ್ಲಿ ಇದ್ದ ಹಣವೆಷ್ಟು, ಅವರು ನೀಡಿದ ಕಾಮಗಾರಿಗಳೆಷ್ಟು? ಎಂದು ಪಟ್ಟಿ ನೀಡಲೇ? ಟೀಕೆ ಮಾಡುವುದು ಬಹಳ ಸುಲಭ, ಅಧಿಕಾರದಲ್ಲಿದ್ದಾಗ ನಿಭಾಯಿಸುವುದು ಸವಾಲಿನ ವಿಚಾರ. ನಾವು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ. ನಮಗೆ ಜನರ ಬದುಕಿನ ಬಗ್ಗೆ ಕಾಳಜಿ ಇದೆ. ನಾವು ಜಾತಿ, ಧರ್ಮದ ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ” ಎಂದು ತಿಳಿಸಿದರು.

ರಾಜ್ಯದಲ್ಲಿ ಹಣಕಾಸಿನ ಕೊರತೆ ಎದುರಾಗುವ ಸಾಧ್ಯತೆ ಕುರಿತು ಮುಖ್ಯಮಂತ್ರಿ ಅವರಿಗೆ ಹಣಕಾಸು ಇಲಾಖೆ ನೀಡಿರುವ ಸಲಹೆಯನ್ನು ಆಧರಿಸಿ ಬಿಜೆಪಿ ನಡೆಸಿದ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಹಣಕಾಸು ಇಲಾಖೆಯ ಸಲಹೆ ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ಅದನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ ಎಂದು ಹೇಳಿದರು.

“ಬಿಜೆಪಿ ಖಾಲಿ ಕೊಡಗಳನ್ನು ಹಿಡಿದು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಹೇಳುವುದಾದರೆ, ಅದು ಹಣಕಾಸು ಇಲಾಖೆ ನೀಡಿರುವ ಸಲಹೆ. ಹಣಕಾಸು ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡುವುದು ಅದರ ಕರ್ತವ್ಯ,” ಎಂದು ಅವರು ಹೇಳಿದರು.

ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಇದೇ ರೀತಿಯ ಎಚ್ಚರಿಕೆಗಳನ್ನು ಹಣಕಾಸು ಇಲಾಖೆ ನೀಡಿತ್ತು ಎಂದು ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದಲ್ಲಿ ಹಣಕಾಸಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

“ಈಗ ಬರ ಪರಿಸ್ಥಿತಿ ಇದೆ. ಇದರಿಂದ ದೇಶದಲ್ಲೂ ಮತ್ತು ರಾಜ್ಯದಲ್ಲೂ ಸಾಕಷ್ಟು ಹಣಕಾಸಿನ ಸಂಕಷ್ಟ ಎದುರಾಗಬಹುದು. ಇದು ರಾಜಕೀಯ ವಿಚಾರವಲ್ಲ,” ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.