ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆ
ಈ ಬಾರಿ ಮೈಸೂರು ದಸರಾ ಊದ್ಘಾಟಕರಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಸ್ವಾಮೀಜಿಯನ್ನು ಆಯ್ಕೆ ಮಾಡಲಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಉದ್ಘಾಟಕರು ಯಾರು ಎನ್ನುವ ಗೊಂದಲಕ್ಕೆ ಕೊನೆಗೂ ಗುರುವಾರ ತೆರೆ ಬಿದ್ದಿದೆ.
ಈ ಬಾರಿ ಮೈಸೂರು ದಸರಾ ಊದ್ಘಾಟಕರಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯನ್ನು ಆಯ್ಕೆ ಮಾಡಲಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಅಕ್ಟೋಬರ್ 11ಕ್ಕೆ ಮಸೂರು ದಸರಾ ಉದ್ಘಾಟಿಸಲಿದ್ದು, ಅಕ್ಟೋಬರ್ 21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.
ಈ ದಸರಾವನ್ನು ಅದ್ಧೂರಿಯ ಜೊತೆಗೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ನಾಡಹಬ್ಬವನ್ನು ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ 18ನೇ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ತಮ್ಮ ಅಭೂತಪೂರ್ವ ಸಾಮಾಜಿಕ ಕಳಕಳಿ, ಸರಳತೆ ಮತ್ತು ದಾಸೋಹ ಪರಂಪರೆಯಿಂದಾಗಿ ನಾಡಿನಾದ್ಯಂತ ‘ನಡೆದಾಡುವ ದೇವರು’ ಹಾಗೂ ‘ಜಲಋಷಿ’ ಎಂದೇ ಹೆಸರು ವಾಸಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



