ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 5 ರೂಪಾಯಿ ಹೆಚ್ಚಳಕ್ಕೆ ಸರ್ಕಾರ ಸಮ್ಮತಿ: ಅಧಿಕೃತ ಆದೇಶವೊಂದೇ ಬಾಕಿ!
ಹಾಲು ಉತ್ಪಾದನಾ ಹಾಗೂ ನಿರ್ವಹಣಾ ವೆಚ್ಚಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಿಸಬೇಕು ಎಂದು ರಾಜ್ಯದ 16 ಹಾಲು ಒಕ್ಕೂಟಗಳ ಸಂಘವು ಸರ್ಕಾರಕ್ಕೆ ತೀವ್ರ ಒತ್ತಡ ಹೇರಿತ್ತು.

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿಗಳಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅಂತಿಮವಾಗಿ ಸಮ್ಮತಿ ಸೂಚಿಸಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಹಾಲು ಉತ್ಪಾದನಾ ಹಾಗೂ ನಿರ್ವಹಣಾ ವೆಚ್ಚಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಿಸಬೇಕು ಎಂದು ರಾಜ್ಯದ 16 ಹಾಲು ಒಕ್ಕೂಟಗಳ ಸಂಘವು ಸರ್ಕಾರಕ್ಕೆ ತೀವ್ರ ಒತ್ತಡ ಹೇರಿತ್ತು.
ಆರಂಭದಲ್ಲಿ ಪ್ರತಿ ಲೀಟರ್‌ಗೆ ಬರೋಬ್ಬರಿ 10 ರೂ.ಗಳಷ್ಟು ಏರಿಕೆ ಮಾಡುವಂತೆ ಒಕ್ಕೂಟಗಳು ಬೇಡಿಕೆ ಇಟ್ಟಿದ್ದವು. ಒಂದು ವೇಳೆ ದರ ಏರಿಕೆ ಮಾಡದಿದ್ದರೆ 'ವಿಧಾನಸೌಧ ಚಲೋ' ನಡೆಸುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದವು. ಒಕ್ಕೂಟಗಳ ಈ ಎಚ್ಚರಿಕೆ ಹಾಗೂ ಹಾಲು ಉತ್ಪಾದಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಅಂತಿಮವಾಗಿ ಮಧ್ಯಮ ಮಾರ್ಗವನ್ನು ಕಂಡುಕೊಂಡಿದೆ.
ಗ್ರಾಹಕರಿಗೆ ವಿಪರೀತ ಆರ್ಥಿಕ ಹೊರೆಯೂ ಆಗಬಾರದು ಹಾಗೂ ರೈತರಿಗೂ ಮತ್ತು ಉತ್ಪಾದಕರಿಗೂ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಹಾಲಿನ ದರವನ್ನು ಲೀಟರ್‌ಗೆ 4 ರಿಂದ 5 ರೂ.ಗಳವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ.
ಹಾಲು ಉತ್ಪಾದಕ ರೈತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದ್ದು, ಪರಿಷ್ಕೃತ ದರವು ಶೀಘ್ರದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.
ಇತ್ತೀಚಿಗಷ್ಟೇ ಹಾಲು ಒಕ್ಕೂಟಗಳ ನಿಯೋಗವು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ 8 ರೂ.ಯಿಂದ 10 ರೂ.ನಷ್ಟು ಏರಿಕೆ ಮಾಡುವಂತೆ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಸಿಎಂ 16 ಜಿಲ್ಲೆಗಳ ಹಾಲು ಸಹಕಾರ ಸಂಘಗಳ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಹಾಲಿನ ದರ ಲೀ.ಗೆ 4-5 ರೂ. ಹೆಚ್ಚಳವಾಗುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



