ತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!
30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ತುಮಕೂರು: 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಅವರು ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು.
ಈ ಕೆಲಸಕ್ಕಾಗಿ ನಾಗೇಶ್ 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ 35 ಸಾವಿರ ಪಡೆದಿದ್ದ ನಾಗೇಶ್ ಎರಡನೇ ಕಂತಿನ 30 ಸಾವಿರವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಎಸ್‌ಪಿ ಮಲ್ಲೇಶ್ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



