ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ₹2,500 ಆರ್ಥಿಕ ನೆರವು: ಬ್ಯಾಂಕ್ ಖಾತೆಗಳಿಗೆ ನೇರ ಜಮೆ!
ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗೆ 2,500 ರೂಪಾಯಿ ಹಾಕೋದಾಗಿ ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಕ್ಷಣದ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮೊದಲ ಹಂತವಾಗಿ ರಾಜ್ಯದ ಸುಮಾರು 40 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,500 ರೂಪಾಯಿಗಳನ್ನು ನೇರವಾಗಿ ಜಮೆ ಮಾಡಲು ತೀರ್ಮಾನಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಬಿಡುಗಡೆಯಾಗುವುದನ್ನು ಕಾಯದೆ, ರಾಜ್ಯ ಸರ್ಕಾರವೇ ತನ್ನ ಸಂಪನ್ಮೂಲಗಳಿಂದ ರೈತರಿಗೆ ತಾತ್ಕಾಲಿಕ ನೆರವು ನೀಡಲು ಮುಂದಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗೆ 2,500 ರೂಪಾಯಿ ಹಾಕೋದಾಗಿ ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.
ಇದರಿಂದ ಬರ ಹಾಗೂ ಸಂಕಷ್ಟದಿಂದ ತೊಂದರೆಗೊಳಗಾಗಿರುವ ರೈತರಿಗೆ ಸರ್ಕಾರದ ಕಡೆಯಿಂದ ತಾತ್ಕಾಲಿಕ ಸಾಂತ್ವನದ ನೆರವಾಗಲಿದೆ .ಸದ್ಯ, 40 ಲಕ್ಷ ರೈತರಿಗೆ ಹಣ ಜಮೆಯಾಗಲಿದ್ದು, ಆರಂಭಿಕ ಹಂತದಲ್ಲಿ ಸರ್ಕಾರ 2500 ರೂ ಜಮೆ ಮಾಡಲಿದೆ.

ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!
ಕೇಂದ್ರದಿಂದ ಹಣಕಾಸಿನ ನೆರವು ಬಂದ ಬಳಿಕ ಮತ್ತೆ ಸರ್ಕಾರ ಹಣ ಹಾಕಲಿದೆ. ರಾಜ್ಯ ಸರ್ಕಾರದಿಂದ ₹2,500 ನೆರವು ನೀಡಿದ ಬಳಿಕ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಬಿಡುಗಡೆಯಾದರೆ, ನಿಯಮಾನುಸಾರ ರೈತರಿಗೆ ಮತ್ತಷ್ಟು ಪರಿಹಾರ ನೀಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಈ ಪ್ರಸ್ತಾವನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಸಂಪುಟದ ಒಪ್ಪಿಗೆ ದೊರೆತ ಬಳಿಕ ಅರ್ಹ ರೈತರ ಸಂಖ್ಯೆ, ಹಣಕಾಸಿನ ಒಟ್ಟು ಹೊರೆ ಹಾಗೂ ಹಣ ಜಮಾ ಮಾಡುವ ಪ್ರಕ್ರಿಯೆ ಸೇರಿದಂತೆ ವಿವರಗಳನ್ನು ಸರ್ಕಾರ ಪ್ರಕಟಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


