JDS ಮುಖಂಡ ಅಂದಾನಪ್ಪ ಮನೆಯಲ್ಲಿ ವಾಚ್ಮ್ಯಾನ್ ಆತ್ಮಹತ್ಯೆ: ಪೊಲೀಸರಿಂದ ತನಿಖೆ ಆರಂಭ
ಇಂದು ಬೆಳಗ್ಗೆ ಕಟ್ಟಡದ ಆವರಣದಲ್ಲಿದ್ದ ಸ್ಟಾರ್ಫ್ರೂಟ್ ಮರಕ್ಕೆ ಶಾಲಿನಿಂದ ನೇಣು ಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಗಳೂರು: ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಲಗ್ಗೆರೆ ನಿವಾಸದಲ್ಲಿ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ನಿವಾಸಿ ನಾಗರಾಜ್ (65) ಎಂದು ಗುರುತಿಸಲಾಗಿದೆ. ಕಳೆದ 4-5 ವರ್ಷಗಳಿಂದ ಅಂದಾನಪ್ಪ ಅವರ ಲಗ್ಗೆರೆ ಬಳಿಯಿರುವ ಮನೆಯಲ್ಲಿ ವಾಚ್ಮ್ಯಾನ್ ಆಗಿ ನಾಗರಾಜ್ ಕೆಲಸ ಮಾಡುತ್ತಿದ್ದರು.
ಇಂದು ಬೆಳಗ್ಗೆ ಕಟ್ಟಡದ ಆವರಣದಲ್ಲಿದ್ದ ಸ್ಟಾರ್ಫ್ರೂಟ್ ಮರಕ್ಕೆ ಶಾಲಿನಿಂದ ನೇಣು ಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಹಿತಿ ತಿಳಿದು ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


