ರಾಜ್ಯ

₹77 ಸಾವಿರ ಬಿಲ್ ಬಾಕಿ: ಮನೆಗೆ ಕರೆಸಿ ಹೆಸ್ಕಾಂ ಅಧಿಕಾರಿಗಳ ಮೇಲೆ MLC ಚನ್ನರಾಜ್ ಹಟ್ಟಿಹೊಳಿ ಹಲ್ಲೆ ಆರೋಪ; FIR ದಾಖಲಾಗಿಲ್ಲ!

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ MLC ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಹೆಸ್ಕಾಂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ತಿಂಗಳ 77,360 ಕರೆಂಟ್​ ಬಿಲ್ ಬಾಕಿ ಹಿನ್ನೆಲೆ MLC ಚನ್ನರಾಜ್ ಹಟ್ಟಿಹೊಳಿ...

₹77 ಸಾವಿರ ಬಿಲ್ ಬಾಕಿ: ಮನೆಗೆ ಕರೆಸಿ ಹೆಸ್ಕಾಂ ಅಧಿಕಾರಿಗಳ ಮೇಲೆ MLC ಚನ್ನರಾಜ್ ಹಟ್ಟಿಹೊಳಿ ಹಲ್ಲೆ ಆರೋಪ; FIR ದಾಖಲಾಗಿಲ್ಲ!
ಹೆಸ್ಕಾಂನ ಎಇಇ ದೀಪಕ್, ಚೆನ್ನರಾಜ್ ಹಟ್ಟಿಹೊಳಿ, ವಿಭಾಗಾಧಿಕಾರಿ ರಾಜು ಚವ್ಹಾಣ
Published On :

ಬೆಳಗಾವಿ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ MLC ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಹೆಸ್ಕಾಂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ತಿಂಗಳ 77,360 ಕರೆಂಟ್​ ಬಿಲ್ ಬಾಕಿ ಹಿನ್ನೆಲೆ MLC ಚನ್ನರಾಜ್ ಹಟ್ಟಿಹೊಳಿ ಆಪ್ತನಾಗಿರುವ ಪ್ರಮೋದ್ ಜಾಧವ್ ಎಂಬವರಿಗೆ ಸೇರಿದ ಲಕ್ಷ್ಮೀ ಸ್ಟೋನ್​ ಕ್ರಷರ್​ಗೆ ವಿದ್ಯುತ್ ಸಂಪರ್ಕ​ ಕಟ್ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ತಮ್ಮ ಬೆಳಗಾವಿಯ ಕುವೆಂಪು ನಗರದಲ್ಲಿರುವ ನಿವಾಸಕ್ಕೆ ಎಇಇ ದೀಪಕ್, ಸೆಕ್ಷನ್ ಆಫೀಸರ್ ರಾಜು ಅವರನ್ನು ಕರೆಸಿಕೊಂಡು ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ. ವಿದ್ಯುತ್ ಸಂಪರ್ಕವನ್ನು ಯಾಕೆ ಕಡಿತಗೊಳಿಸಿದ್ದೀರಿ ಎಂದು ಪ್ರಶ್ನಿಸಿ, ಅವಾಚ್ಯ ಶಬ್ದದಿಂದ ನಿಂದಿಸಿ ಎಂಎಲ್​ಸಿ ಹಟ್ಟಿಹೊಳಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಹೆಸ್ಕಾಂ ಸಿಬ್ಬಂದಿಗಳು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಈ ಘಟನೆಯ ನಂತರ, ಶುಕ್ರವಾರ ಮಧ್ಯಾಹ್ನ ಹೆಚ್ಚಿನ ಸಂಖ್ಯೆಯ ಹೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಎಪಿಎಂಸಿ (APMC) ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು ಎಂಎಲ್‌ಸಿ ವಿರುದ್ಧ ದೂರು ದಾಖಲಿಸುವಂತೆ ಒತ್ತಾಯಿಸಿದ್ದರು. ಆದರೆ, ಅಂತಿಮವಾಗಿ ಯಾವುದೇ ದೂರು ದಾಖಲಿಸಲಾಗಲಿಲ್ಲ. ದೂರು ದಾಖಲಿಸಿದರೆ ಮಾತ್ರ ಪೊಲೀಸರು ಎಫ್‌ಐಆರ್ (FIR) ದಾಖಲಿಸಲು ಸಾಧ್ಯ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ತಿಳಿಸಿದರು. ಅಧಿಕಾರಿಗಳು ಸಾರ್ವಜನಿಕವಾಗಿ ಹಲ್ಲೆಯ ಆರೋಪ ಮಾಡಿದರೂ ದೂರು ದಾಖಲಿಸದಿರುವುದು, ದೂರು ನೀಡುವ ನಿರ್ಧಾರದಿಂದ ಹಿಂದೆ ಸರಿಯಲು ಕಾರಣವಾದ ಸನ್ನಿವೇಶಗಳ ಬಗ್ಗೆ ಹೆಸ್ಕಾಂ ವಲಯಗಳಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಏತನ್ಮಧ್ಯೆ, ಹಟ್ಟಿಹೊಳಿ ಅವರು ತಮ್ಮ ನಿವಾಸದಲ್ಲಿ ಹೆಸ್ಕಾಂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದನ್ನು ನಿರಾಕರಿಸಿದರು. ತಾವು ಕೇವಲ ಅಧಿಕಾರಿಗಳಿಗೆ ಜನರೊಂದಿಗೆ ಸಹಕರಿಸುವಂತೆಯೂ ಮತ್ತು ಬಾಕಿ ಇರುವ ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಅವರಿಗೆ ಇನ್ನೂ ಸ್ವಲ್ಪ ಸಮಯ ನೀಡುವಂತೆಯೂ ಮನವಿ ಮಾಡಿದ್ದಾಗಿ ಅವರು ಹೇಳಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಯಾವುದೇ ಪ್ರಕರಣ ದಾಖಲಿಸಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.