ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಮೊಹಮ್ಮದ್ ಅಜರುದ್ದೀನ್; Video
ಈ ಸಂದರ್ಭದಲ್ಲಿ ಉಭಯ ಹಿರಿಯ ನಾಯಕರ ನಡುವೆ ಆತ್ಮೀಯ ಹಾಗೂ ಸೌಹಾರ್ದಯುತ ಮಾತುಕತೆ ನಡೆಯಿತು.

ಬೆಂಗಳೂರು: ತೆಲಂಗಾಣದ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ನಿನ್ನೆ ಗುರುವಾರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಉಭಯ ಹಿರಿಯ ನಾಯಕರ ನಡುವೆ ಆತ್ಮೀಯ ಹಾಗೂ ಸೌಹಾರ್ದಯುತ ಮಾತುಕತೆ ನಡೆಯಿತು.

ಮಾಜಿ ಕ್ರಿಕೆಟಿಗ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ ಕಳೆದ ಅಕ್ಟೋಬರ್ ನಲ್ಲಿ ಹೈದರಾಬಾದ್‌ನ ರಾಜಭವನದಲ್ಲಿ ನಡೆದ ಔಪಚಾರಿಕ ಕಾರ್ಯಕ್ರಮದಲ್ಲಿ ತೆಲಂಗಾಣ ಸಚಿವ ಸಂಪುಟಕ್ಕೆ ಸಚಿವರಾಗಿ ಸೇರ್ಪಡೆಗೊಂಡಿದ್ದರು. ಕರ್ನಾಟಕದಲ್ಲಿ ಬದಲಾದ ರಾಜಕೀಯ ಸ್ಥಿತ್ಯಂತರದಲ್ಲಿ ಸಿದ್ದರಾಮಯ್ಯನವರು ಮಾಜಿಯಾಗಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಳೆದ ಮೇ ಅಂತ್ಯದಲ್ಲಿ ಅಧಿಕಾರ ವಹಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



