ರಾಜ್ಯ

ಐತಿಹಾಸಿಕ ದಸರಾ ಉದ್ಘಾಟಿಸಲಿರುವ ಕ್ರೇಜಿಸ್ಟಾರ್‌ ರವಿಚಂದ್ರನ್; ಅಕ್ಟೋಬರ್ 15ಕ್ಕೆ ಶ್ರೀರಂಗಪಟ್ಟಣ ದಸರಾಗೆ ಚಾಲನೆ

Srirangapatna Dasara 2026: 2026ರ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ, 'ಕ್ರೇಜಿಸ್ಟಾರ್' ವಿ. ರವಿಚಂದ್ರನ್ ಅವರು ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಐತಿಹಾಸಿಕ ದಸರಾ ಉದ್ಘಾಟಿಸಲಿರುವ ಕ್ರೇಜಿಸ್ಟಾರ್‌ ರವಿಚಂದ್ರನ್; ಅಕ್ಟೋಬರ್ 15ಕ್ಕೆ ಶ್ರೀರಂಗಪಟ್ಟಣ ದಸರಾಗೆ ಚಾಲನೆ
ಐತಿಹಾಸಿಕ ದಸರಾ ಉದ್ಘಾಟಿಸಲಿರುವ ಕ್ರೇಜಿಸ್ಟಾರ್‌ ರವಿಚಂದ್ರನ್ — Online Desk
Published On :

ಶ್ರೀರಂಗಪಟ್ಟಣ (ಮಂಡ್ಯ): 2026ರ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟ, 'ಕ್ರೇಜಿಸ್ಟಾರ್' ವಿ. ರವಿಚಂದ್ರನ್ ಅವರು ಉದ್ಘಾಟಿಸಲಿದ್ದಾರೆ. ಮಂಡ್ಯ ಜಿಲ್ಲಾಡಳಿತ ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿರುವ ನಟ ರವಿಚಂದ್ರನ್ ಅವರ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಮೈಸೂರು ದಸರಾ ಮಹೋತ್ಸವಕ್ಕೆ ಮೂಲ ಬುನಾದಿ ಬಿದ್ದಿದ್ದೇ ಶ್ರೀರಂಗಪಟ್ಟಣದಲ್ಲಿ. ಕ್ರಿ.ಶ. 1610ರಲ್ಲಿ ವಿಜಯನಗರ ಸಾಮ್ರಾಜ್ಯದ ಪತನದ ನಂತರ, ರಾಜ ಒಡೆಯರ್ ಅವರು ಶ್ರೀರಂಗಪಟ್ಟಣವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಇಲ್ಲಿಯೇ ಮೊದಲ ಬಾರಿಗೆ ದಸರಾ ಆಚರಣೆಯನ್ನು ಅಧಿಕೃತವಾಗಿ ಪ್ರಾರಂಭಿಸಿದರು. ಇಂತಹ ಗತವೈಭವ ಹೊಂದಿರುವ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಉತ್ಸವವು ಅಕ್ಟೋಬರ್ 15ರಿಂದ 18ರವರೆಗೆ ನಾಲ್ಕು ದಿನಗಳ ಕಾಲ ಜರುಗಲಿದ್ದು, ಅಕ್ಟೋಬರ್ 15ರಂದು ಕಿರಂಗೂರಿನ ಬನ್ನಿಮಂಟಪದಲ್ಲಿ ಆನೆಯ ಮೇಲಿರುವ ಚಾಮುಂಡೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರವಿಚಂದ್ರನ್ ಅವರು ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮುಂದುವರೆದು, ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ಅವರು ನೀಡಿರುವ ಸುದೀರ್ಘ ಕೊಡುಗೆಯನ್ನು ಗೌರವಿಸಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದ್ದು, ಈ ಐತಿಹಾಸಿಕ ಸಾಂಸ್ಕೃತಿಕ ಹಬ್ಬಕ್ಕೆ ಸಿನಿಮಾ ರಂಗದ ಜನಪ್ರಿಯತೆಯೂ ಸೇರ್ಪಡೆಯಾಗಲಿದೆ. ರವಿಚಂದ್ರನ್ ಅವರು ಈ ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದ್ದಾರೆ.

ದಸರಾ ವೇಳೆ ಕಾವೇರಿ ಆರತಿ

ಏತನ್ಮಧ್ಯೆ, ಈ ಬಾರಿಯ ದಸರಾ ಮಹೋತ್ಸವದಲ್ಲಿ ಅತ್ಯಂತ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ಆಕರ್ಷಣೆಯೆಂದರೆ ಕಾವೇರಿ ಆರತಿ. ಅದರಂತೆ, ಅಕ್ಟೋಬರ್ 11ರಿಂದ ಆರಂಭಗೊಂಡು ಒಟ್ಟು ಆರು ದಿನಗಳ ಕಾಲ ಜರುಗಲಿದ್ದು, ಉತ್ತರ ಭಾರತದ ವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿಯೇ, ವಾರಣಾಸಿಯಿಂದ ಆಗಮಿಸುವ ವಿಶೇಷ ಅರ್ಚಕರ ತಂಡವು ಕೃಷ್ಣರಾಜಸಾಗರ ಬೃಂದಾವನ ಗಾರ್ಡನ್ಸ್ ಬಳಿ ಕಾವೇರಿ ನದಿಗೆ ಮಹಾ ಆರತಿ ನೆರವೇರಿಸಲಿದೆ. ಇದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.