ರಾಜ್ಯ

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು; ಇಬ್ಬರು ಶಂಕಿತ ಉಗ್ರರ ಬಂಧನ

ಸಾಮಾಜಿಕ ಜಾಲತಾಣ ಗುಂಪಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಉದ್ದೇಶಿತವಾಗಿದ್ದ ಶಂಕಿತ ಉಗ್ರ ಸಂಚಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಇಬ್ಬರೂ ಭಾಗಿಯಾಗಿದ್ದರು. ಗುಂಪಿನಲ್ಲಿ ಕೆಲವು ಪ್ರಚೋದನಕಾರಿ ಸಂದೇಶಗಳು ಕಂಡುಬಂದಿದ್ದವು.

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು; ಇಬ್ಬರು ಶಂಕಿತ ಉಗ್ರರ ಬಂಧನ
ಸಂಗ್ರಹ ಚಿತ್ರ
Published On :

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಭಾರಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸುತ್ತಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕೇಂದ್ರ ಗುಪ್ತಚರ ಇಲಾಖೆಯ (Intelligence Bureau) ನಿಖರ ಮಾಹಿತಿ ಆಧರಿಸಿ ರಾಜ್ಯ ಪೊಲೀಸ್ ಮತ್ತು ಹೊರರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳ ಪೈಕಿ ಒಬ್ಬನನ್ನು ಬುಧವಾರ ಹಾಗೂ ಮತ್ತೊಬ್ಬನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳ ಗುರುತನ್ನು ಬಹಿರಂಗಪಡಿಸದ ಪೊಲೀಸರು, ಅವರಲ್ಲಿ ಒಬ್ಬ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಯಾಗಿದ್ದು, ಮತ್ತೊಬ್ಬ ಕೆಲಕಾಲದಿಂದ ಕರ್ನಾಟಕದಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಅವರು ಮಾತನಾಡಿ, ಸಾರ್ವಜನಿಕ ಶಾಂತಿಗೆ ಧಕ್ಕೆ ತರಲು ಈ ಇಬ್ಬರು ಸಂಚು ರೂಪಿಸುವ ಚಟುವಟಿಕೆಯಲ್ಲಿ ಭಾಗಿಯಾಗಿದ್ದರೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಾಮಾಜಿಕ ಜಾಲತಾಣ ಗುಂಪಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಉದ್ದೇಶಿತವಾಗಿದ್ದ ಶಂಕಿತ ಉಗ್ರ ಸಂಚಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಇಬ್ಬರೂ ಭಾಗಿಯಾಗಿದ್ದರು. ಗುಂಪಿನಲ್ಲಿ ಕೆಲವು ಪ್ರಚೋದನಕಾರಿ ಸಂದೇಶಗಳು ಕಂಡುಬಂದಿದ್ದವು. ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ. ಇಬ್ಬರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳ ಹಿನ್ನೆಲೆ, ಉದ್ದೇಶ ಹಾಗೂ ಅವರು ಯಾವುದಾದರೂ ದೊಡ್ಡ ಗುಂಪಿನ ಭಾಗವಾಗಿದ್ದರೇ ಎಂಬುದು ಹೆಚ್ಚಿನ ವಿಚಾರಣೆಯ ಬಳಿಕವಷ್ಟೇ ತಿಳಿಯಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.