ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾ
ಜಾಮೀನು ಕೋರಿ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು 59 ಸಿಸಿಎಚ್ ನ್ಯಾಯಾಧೀಶರಾದ ಸುಜಾತ ಎಂ ಸಂಬ್ರಾಣಿ ಅವರು ಇಂದು ವಜಾಗೊಳಿಸಿ ಅದೇಶ ಹೊರಡಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ಶನಿವಾರ ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು 59 ಸಿಸಿಎಚ್ ನ್ಯಾಯಾಧೀಶರಾದ ಸುಜಾತ ಎಂ ಸಂಬ್ರಾಣಿ ಅವರು ಇಂದು ವಜಾಗೊಳಿಸಿ ಅದೇಶ ಹೊರಡಿಸಿದ್ದಾರೆ.
ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದಿರುವುದನ್ನು ಪರಿಗಣಿಸುವಂತೆ ಪವಿತ್ರಾ ಗೌಡ ಪರ ಹಿರಿಯ ವಕೀಲ ಬಾಲನ್ ಹಾಗೂ ವಕೀಲ ನಾರಾಯಣಸ್ವಾಮಿ ವಾದ ಮಾಡಿದ್ದರು. ಅಲ್ಲದೆ ಪವಿತ್ರಾ ಗೌಡ ಅವರು ಸಿಂಗಲ್ ಮದರ್ ಆಗಿದ್ದು, ಮಗಳ ಶಿಕ್ಷಣ, ಆರೋಗ್ಯ, ಮಗಳ ಭವಿಷ್ಯವನ್ನು ಪರಿಗಣಿಸಿ ಮಾನವೀಯ ನೆಲೆಯಲ್ಲಿ ಪವಿತ್ರಾ ಗೌಡಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.
ಆದರೆ ಪವಿತ್ರಾ ಗೌಡ ಪರ ವಕೀಲರ ವಾದವನ್ನು ತಿರಸ್ಕರಿಸಿದ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು, ಜಾಮೀನು ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



