ರಾಜ್ಯ

ಪ್ರಾಣ ಹೋದರೂ ರೈತರನ್ನು ಬಿಟ್ಟುಕೊಡಲ್ಲ, ಅವರಿಗಾಗಿ ಜೈಲಿಗೆ ಹೋಗಲು ನಾನು ಸಿದ್ಧ: ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದ HD ದೇವೇಗೌಡ

ವೀಡಿಯೋ ಕಾಲ್ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ನನಗೆ ತೀವ್ರ ಹಲ್ಲು ನೋವು ಇರುವ ಕಾರಣ ವೈದ್ಯರ ಸಲಹೆಯಂತೆ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ.

ಪ್ರಾಣ ಹೋದರೂ ರೈತರನ್ನು ಬಿಟ್ಟುಕೊಡಲ್ಲ, ಅವರಿಗಾಗಿ ಜೈಲಿಗೆ ಹೋಗಲು ನಾನು ಸಿದ್ಧ: ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದ HD ದೇವೇಗೌಡ
ಎಚ್.ಡಿ ದೇವೇಗೌಡ
Published On :

ರಾಮನಗರ: ಬಿಡದಿ ಹೋಬಳಿಯ ಭೈರಮಂಗಲ ಗ್ರಾಮದಲ್ಲಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಭೇಟಿ ನೀಡಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬರಲೇಬೇಕು ಎಂದು ರೈತ ಮಹಿಳೆಯರು ಹಾಗೂ ರೈತ ಮುಖಂಡರು ನಿಖಿಲ್ ಕುಮಾರಸ್ವಾಮಿ ಎದುರು ಘೋಷಣೆಗಳನ್ನು ಕೂಗಿ ಪಟ್ಟು ಹಿಡಿದರು.

ಬರಲೇಬೇಕು, ಬರಲೇಬೇಕು, ದೇವೇಗೌಡರು ಬರಲೇಬೇಕು ಎಂಬ ಕೂಗು ಮುಗಿಲು ಮುಟ್ಟಿತು. ರೈತರ ಒತ್ತಾಯಕ್ಕೆ ತಕ್ಷಣವೇ ಸ್ಪಂದಿಸಿದ ನಿಖಿಲ್ ಕುಮಾರಸ್ವಾಮಿ, ಸ್ಥಳದಲ್ಲೇ ಮಾಜಿ ಪ್ರಧಾನಿ ದೇವೇಗೌಡರಿಗೆ ವೀಡಿಯೋ ಕಾಲ್ ಮಾಡಿ ರೈತರೊಂದಿಗೆ ಮಾತನಾಡಿಸಿದರು.

ವೀಡಿಯೋ ಕಾಲ್ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ನನಗೆ ತೀವ್ರ ಹಲ್ಲು ನೋವು ಇರುವ ಕಾರಣ ವೈದ್ಯರ ಸಲಹೆಯಂತೆ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ.

ಆದರೆ ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ, ನಿಮ್ಮ ಹೋರಾಟವನ್ನು ಮುಂದುವರೆಸಿ. ಪ್ರಾಣ ಹೋದರೂ ನಾನು ರೈತರನ್ನು ಬಿಟ್ಟುಕೊಡುವುದಿಲ್ಲ. ನಮ್ಮ ಕುಟುಂಬ ಮೊದಲಿನಿಂದಲೂ ರೈತರ ಪರವಾಗಿಯೇ ಹೋರಾಟ ಮಾಡಿಕೊಂಡು ಬಂದಿದೆ. ಅಗತ್ಯಬಿದ್ದರೆ ರೈತರ ಹಕ್ಕುಗಳಿಗಾಗಿ ವಿಧಾನಸೌಧದ ಮುಂದೆ ಧರಣಿ ಕುಳಿತುಕೊಳ್ಳಲು ಸಿದ್ಧ, ಜೈಲಿಗೆ ಹೋಗಲು ನಾನು ಸಿದ್ಧ ಎಂದು ರೈತರಿಗೆ ಧೈರ್ಯ ತುಂಬಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.