ಸಂಗೀತ ಲೋಕಕ್ಕೆ ಆಘಾತ: 'ಕನ್ನಡದ ಶಿವಮಣಿ' ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ ಇನ್ನಿಲ್ಲ..!
ಕಳೆದ ಜೂನ್‌ನಲ್ಲಿ ದೇವ್ ಅವರಿಗೆ ಪಾರ್ಶ್ವವಾಯು (ಸ್ಟ್ರೋಕ್) ಕಾಣಿಸಿಕೊಂಡಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಕ್ರಮೇಣ ಹದಗೆಟ್ಟಿತ್ತು. ಗ್ಯಾಂಗ್ರಿನ್ ಸಮಸ್ಯೆಯಿಂದ ಅವರ ಬಲಗಾಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು.

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ‘ಕನ್ನಡ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಜನಪ್ರಿಯ ಡ್ರಮ್ಮರ್ ದೇವ್ ಅವರು ನಿಧನರಾಗಿದ್ದಾರೆ.
ದೇವ್ ಅವರು, ಆರ್.ಆರ್. ನಗರದ ಸ್ಕಂದಶ್ರೀ ಅಪಾರ್ಟ್‌ಮೆಂಟ್‌ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.
ತಮ್ಮದೇ ವಿಭಿನ್ನ ಬೀಟ್ ಶೈಲಿ ಹಾಗೂ ಅದ್ಭುತ ಪ್ರದರ್ಶನದ ಮೂಲಕ ಸಂಗೀತಾಸಕ್ತರ ಮನಗೆದ್ದಿದ್ದ ದೇವ್, ಸ್ಯಾಂಡಲ್‌ವುಡ್ ಸೇರಿದಂತೆ ಹಲವು ವೇದಿಕೆಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಆರ್‌ಸಿಬಿ ಪಂದ್ಯಾವಳಿಗಳ ವೇಳೆ ಲೈವ್ ಬೀಟ್ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದ್ದರು.
ಕಳೆದ ಜೂನ್‌ನಲ್ಲಿ ದೇವ್ ಅವರಿಗೆ ಪಾರ್ಶ್ವವಾಯು (ಸ್ಟ್ರೋಕ್) ಕಾಣಿಸಿಕೊಂಡಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಕ್ರಮೇಣ ಹದಗೆಟ್ಟಿತ್ತು. ಗ್ಯಾಂಗ್ರಿನ್ ಸಮಸ್ಯೆಯಿಂದ ಅವರ ಬಲಗಾಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು.
ನಂತರ ಸ್ಟ್ರೋಕ್‌ನ ಪರಿಣಾಮ ಆರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ರಾಣಿ ಮುಖರ್ಜಿಗೆ ಮಾತೃ ವಿಯೋಗ: ತಾಯಿ ಕೃಷ್ಣಾ ಮುಖರ್ಜಿ ನಿಧನ; ಖಾಸಗಿತನ ಗೌರವಿಸುವಂತೆ ಬಾಲಿವುಡ್ ನಟಿ ಮನವಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


