2013ರ ಪ್ರಕರಣಕ್ಕೆ ಮರು ಜೀವ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
ಈ ಪ್ರಕರಣಕ್ಕೆ ಸಂಬಂಧಿಸಿ ವಾರೆಂಟ್ ಮೇಲೆ ಹುಬ್ಬಳ್ಳಿ ರೈಲ್ವೆ ಪೊಲೀಸರು ಶಿರಸಿ ಪೊಲೀಸರ ಸಹಕಾರ ಪಡೆದು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಇಂದು ಬಂಧಿಸಿದ್ದಾರೆ.

ಹುಬ್ಬಳ್ಳಿ: 2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸೋಮವಾರ ಬೆಳ್ಳಂಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಶಿರಸಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಲು ಹಾಗೂ ತದ ನಂತರ 11.30ಕ್ಕೆ ದಾಸನಕೊಪ್ಪದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಲು ರೈತ ಸಂಘ ಉದ್ದೇಶಿಸಲಾಗಿತ್ತು.
ಅದಕ್ಕಾಗಿ ಕೋಡಿಹಳ್ಳಿ ಚಂದ್ರಶೇಖರ್ ಶಿರಸಿಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ಸುಮಾರು ಆರು ಗಂಟೆ ಎಲ್ಲಾ ರೈಲುಗಳನ್ನು ತಡೆದು ರೈತರು ಹೋರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಾರೆಂಟ್ ಮೇಲೆ ಹುಬ್ಬಳ್ಳಿ ರೈಲ್ವೆ ಪೊಲೀಸರು ಶಿರಸಿ ಪೊಲೀಸರ ಸಹಕಾರ ಪಡೆದು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಇಂದು ಬಂಧಿಸಿದ್ದಾರೆ.
ಇನ್ನು ರೈತ ಹೋರಾಟಗಾರ ಕೋಡಿಹಳ್ಳಿ ಅವರನ್ನು ನ್ಯಾಯಾಲಯದ ವಾರಂಟ್ ಮೇಲೆ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧನದ ಬಳಿಕ ಕೋಡಿಹಳ್ಳಿ ಅವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಗಿದ್ದು ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ನಂತರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



