ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ: ಸಂತೋಷದಿಂದ ಸ್ವೀಕರಿಸಿದ ಸ್ವಾಮೀಜಿ!

ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿರಸ್ಕೃತಿಸಿದ್ದಾರೆ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಸಚಿವ ಶಿವರಾಜ್ ತಂಗಡಗಿ ಗವಿಮಠಕ್ಕೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದರು.

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ: ಸಂತೋಷದಿಂದ ಸ್ವೀಕರಿಸಿದ ಸ್ವಾಮೀಜಿ!
ಶಿವರಾಜ್ ತಂಗಡಗಿ, ಗವಿಸಿದ್ದೇಶ್ವರ ಸ್ವಾಮೀಜಿ
Published On :

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿರಸ್ಕೃತಿಸಿದ್ದಾರೆ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು ಗವಿಮಠಕ್ಕೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದರು. ಅಕ್ಟೋಬರ್ 11ರಂದು ದಸರಾಗೆ ಚಾಲನೆ ದೊರೆಯಲಿದ್ದು, ಅ.21ರಂದು ವಿಜಯದಶಮಿ ಜಂಬೂಸವಾರಿ ಜರುಗಲಿದೆ. ಇನ್ನು ದಸರಾ ಉದ್ಘಾಟನೆ ಆಹ್ವಾನವನ್ನು ಗವಿಸಿದ್ದೇಶ್ವರ ಶ್ರೀಗಳು ಬಹಳ ಸಂತೋಷದಿಂದ ಸ್ವೀಕರಿಸಿದರು.

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅಧಿಕೃತ ಆಹ್ವಾನ ನೀಡಲಾಗಿದ್ದು ಇದಕ್ಕೆ ಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್‌ ತಂಗಡಗಿ ಇಂದು ಅಧಿಕೃತವಾಗಿ ಆಹ್ವಾನಿಸಿದರು. ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕವಾಗಿರುವ ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.