ಮಹಿಷ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದೆ- ಸಂಸದ ಯದುವೀರ್ ಒಡೆಯರ್!
ಸಾರ್ವಜನಿಕರು ಧಾರ್ಮಿಕ ಆಚರಣೆಗಳನ್ನು ನಡೆಸಲು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಜನರ ಧಾರ್ಮಿಕ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.

ಮೈಸೂರು: ಮಹಿಷಾ ದಸರಾ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದ್ದು, ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಆಚರಣೆ ಮಾಡಲಿ ಎಂದು ಸಂಸದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಧಾರ್ಮಿಕ ಆಚರಣೆಗಳನ್ನು ನಡೆಸಲು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಜನರ ಧಾರ್ಮಿಕ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.
ಮಹಿಷಾ ದಸರಾವನ್ನು ಆಚರಿಸುವಾಗ ಯಾರಿಗೂ ಯಾವುದೇ ಹಾನಿ ಅಥವಾ ತೊಂದರೆಯಾಗದ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬಹುದು ಎಂದರು.

ಮೈಸೂರು ದಸರಾ ಚಲನಚಿತ್ರೋತ್ಸವ ರದ್ದು: ಕಂಬಳಕ್ಕೆ ಕೋಟಿ ಅನುದಾನ ಕೊಟ್ಟಿದ್ದೇ ಕಾರಣವಾ? ಸಂಸದ ಯದುವೀರ್ ಒಡೆಯರ್ ಅಸಮಾಧಾನ
ಇದೇ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಬೇಕು ಎಂಬ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದರು, ಅದು ತಾಯಿ ಚಾಮುಂಡೇಶ್ವರಿ ಇರುವ ಕ್ಷೇತ್ರ, ಅಲ್ಲಿ ಯಾಕೆ ಎಂದು ಪ್ರಶ್ನಿಸಿದರು.
ಮಹಿಷಾ ದಸರಾ ಆಚರಣೆ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಲಿ. ಆದರೆ ಧರ್ಮದಲ್ಲಿ ಪದ್ಧತಿ ಏನಿದೆ, ನಂಬಿಕೆ ಏನಿದೆ ಎಂಬುದನ್ನು ನಾವು ಅನುಸರಿಸುತ್ತೇವೆ. ಅದಕ್ಕೆ ಧಕ್ಕೆ ಬರಬಾರದು. ಪ್ರಜೆಗಳ ಪ್ರತಿನಿಧಿಗಳಾದ ನಾವು ಜವಾಬ್ದಾರಿಯುತವಾಗಿ ಚಾಮುಂಡಿ ಬೆಟ್ಟದಲ್ಲಿ ಏನು ಪರಂಪರೆ ಹಾಗೂ ನಂಬಿಕೆ ಏನು ಇದೆ ಎಂಬುದನ್ನು ಅಧಿಕಾರಿಗಳಿಗೆ ವ್ಯಕ್ತಪಡಿಸಿದ್ದೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


