'ಸಾಮಾನು ಬೇಗ ಕೈಗೆ ಸಿಗಲಿಲ್ಲ ಅದಕ್ಕೆ ಲೇಟ್ ಆಯಿತು': ತಡವಾಗಿ ಬಂದಿದ್ದಕ್ಕೆ ಸಚಿವ ಯತೀಂದ್ರ ಸ್ಪಷ್ಟನೆ! Video
ಯತೀಂದ್ರ ತಡವಾಗಿ ಬಂದಿದ್ದಕ್ಕೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು, ಸಮಯ ಪ್ರಜ್ಞೆ ಇಲ್ವೇನ್ರೀ? ಎಂದು ಸಚಿವರನ್ನೇ ಪ್ರಶ್ನಿಸಿದ್ದಾರೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ದಸರಾ ಗಜಪಡೆ ಮಾವುತರು, ಕಾವಾಡಿಗಳಿಗೆ ಉಪಾಹಾರ ಮತ್ತು ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ತಡವಾಗಿ ಬಂದ ಘಟನೆ ಸೋಮವಾರ ನಡೆದಿದೆ.
ಯತೀಂದ್ರ ತಡವಾಗಿ ಬಂದಿದ್ದಕ್ಕೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು, ಸಮಯ ಪ್ರಜ್ಞೆ ಇಲ್ವೇನ್ರೀ? ಎಂದು ಸಚಿವರನ್ನೇ ಪ್ರಶ್ನಿಸಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಉಪಹಾರ ಕಾರ್ಯಕ್ರಮಕ್ಕೆ ಯತೀಂದ್ರ ಸಿದ್ದರಾಮಯ್ಯ ಒಂದು ತಾಸು ತಡವಾಗಿ, ಅಂದರೆ 10 ಗಂಟೆಗೆ ಆಗಮಿಸಿದರು. ಇದರಿಂದ ಮಾವುತರು ಮತ್ತು ಕಾವಾಡಿಗರು ಒಂದು ಗಂಟೆ ಕಾಲ ಕಾಯುವಂತಾಯಿತು.
ಬೆಳಗ್ಗೆಯಿಂದ ಕಾಯುತ್ತಿದ್ದ ಮಾವುತರಿಗೆ ಗೌರವ ನೀಡಬೇಕು, ಸಮಯಕ್ಕೆ ಸರಿಯಾಗಿ ಉಪಹಾರ ನೀಡಬೇಕು, ಅವರನ್ನು ಊಟಕ್ಕಾಗಿ ಕಾಯಿಸುವುದು ಸರಿಯಲ್ಲ ಎಂದು ಶಾಸಕ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿ, ಕೂಡಲೇ ಅಧಿಕಾರಿಗಳಿಗೆ ಕಾರ್ಯಕ್ರಮ ಆರಂಭಿಸುವಂತೆ ಸೂಚಿಸಿದರು. ಆದರೆ ಅಧಿಕಾರಿಗಳು ಸಹ ಕಾರ್ಯಕ್ರಮವನ್ನು ಆರಂಭಿಸಲು ವಿಳಂಬ ಮಾಡಿದ್ದಕ್ಕೆ ಮತ್ತಷ್ಟು ಸಿಡಿಮಿಡಿಗೊಂಡು ಸ್ಥಳದಿಂದ ಹೊರನಡೆದರು.
ಇನ್ನು ತಾವು ತಡವಾಗಿ ಬಂದಿದ್ದಕ್ಕೆ ಸಮಜಾಯಿಷಿ ನೀಡಿದ ಸಚಿವ ಯತೀಂದ್ರ ಅವರು, ನಮ್ಮದು ಹೊಸ ಮನೆ, ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು. ಸಾಮಾನು ಯಾವುದೂ ಬೇಗ ಕೈಗೆ ಸಿಗಲಿಲ್ಲ ಅದಕ್ಕೆ ಸ್ವಲ್ಪ ಲೇಟ್ ಆಯಿತು. ಮನೆಯಲ್ಲಿ ಅಮ್ಮ ಇರಲಿಲ್ಲ, ಕೆಲಸಗಾರರೂ ಇರಲಿಲ್ಲ. ಹೀಗಾಗಿ ಕೆಲವೊಂದಿಷ್ಟು ವ್ಯವಸ್ಥೆ ಮಾಡಿ ಬರುವುದರಲ್ಲಿ ತಡವಾಯಿತು. ಉದ್ದೇಶಪೂರ್ವಕವಾಗಿ ತಡಮಾಡಿ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



