ಬ್ಯಾಂಕಾಕ್‌ನಿಂದ ಬಂದವರ ಬ್ಯಾಗ್‌ನಲ್ಲಿ 6.33 ಕೋಟಿ ರೂ ಮೌಲ್ಯದ ಗಾಂಜಾ ಪತ್ತೆ; ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಬ್ಬರ ಬಂಧನ!
ಮೊದಲ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದಾಗ 3.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 1.09 ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನ ಬ್ಯಾಗ್‌ನಲ್ಲಿ 14.97 ಕೆ.ಜಿ...

ಬೆಂಗಳೂರು: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರನ್ನು ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.33 ಕೋಟಿ ರೂ ಮೌಲ್ಯದ 18.09 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 26ರಂದು ಈ ಕಾರ್ಯಾಚರಣೆ ನಡೆದಿದ್ದು, ಇಬ್ಬರೂ ಪ್ರಯಾಣಿಕರು ತಮ್ಮ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಗಾಂಜಾವನ್ನು ಅಡಗಿಸಿಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದಾಗ 3.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 1.09 ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನ ಬ್ಯಾಗ್‌ನಲ್ಲಿ 14.97 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ಇದರ ಮೌಲ್ಯ ಸುಮಾರು 5.24 ಕೋಟಿ ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರನ್ನೂ ಮಾದಕ ದ್ರವ್ಯಗಳು ಮತ್ತು ಅಮಲು ಪದಾರ್ಥಗಳ ಕಾಯ್ದೆ (NDPS Act) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿನ್ನ, ಗಾಂಜಾ ಸ್ಮಗ್ಲಿಂಗ್ ವಿರುದ್ಧ ಕಸ್ಟಮ್ಸ್ ಕಾರ್ಯಾಚರಣೆ
ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ‘X’ನಲ್ಲಿ ಸರಣಿ ಪೋಸ್ಟ್‌ಗಳ ಮೂಲಕ ಇತ್ತೀಚೆಗೆ ನಡೆಸಿದ ಚಿನ್ನ ಮತ್ತು ಗಾಂಜಾ ಜಪ್ತಿ ಕಾರ್ಯಾಚರಣೆಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 24ರಂದು ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನೊಬ್ಬನಿಂದ 12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
ಇದರ ಮೌಲ್ಯ ಸುಮಾರು 4.20 ಕೋಟಿ ರೂ ಎಂದು ಅಂದಾಜಿಸಲಾಗಿತ್ತು. ಅದೇ ದಿನ ಬ್ಯಾಂಕಾಕ್‌ನಿಂದ ಬಂದ ಮತ್ತೊಬ್ಬ ಪ್ರಯಾಣಿಕನಿಂದ 6.54 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಲಾಗಿತ್ತು. ಇದರ ಮೌಲ್ಯ ಸುಮಾರು 2.29 ಕೋಟಿ ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಗಳ ಕಾಲಿಗೆ ಚಿನ್ನದ ಕಾಲುಂಗುರ!
ಸೆಪ್ಟೆಂಬರ್ 23ರಂದು ಕೊಲಂಬೊದಿಂದ ಬಂದಿದ್ದ ಪ್ರಯಾಣಿಕನೊಬ್ಬನನ್ನು ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ತಡೆದು ಪರಿಶೀಲಿಸಲಾಗಿತ್ತು.
ತನ್ನ ಮಗಳಿಗೆ ಬೆಳ್ಳಿ/ರೋಡಿಯಂ ಲೇಪಿತ ಚಿನ್ನದ ಕಾಲುಂಗುರಗಳನ್ನು ತೊಡಿಸುವ ಮೂಲಕ ಚಿನ್ನವನ್ನು ಅಕ್ರಮವಾಗಿ ಸಾಗಿಸಿ, ಅಧಿಕಾರಿಗಳ ಕಣ್ಣುತಪ್ಪಿಸಲು ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಆತನಿಂದ 823 ಗ್ರಾಂ ಚಿನ್ನ, ಸುಮಾರು 1.24 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಅದೇ ದಿನ ಕೌಲಾಲಂಪುರದಿಂದ ಬಂದ ಮತ್ತೊಬ್ಬ ಪ್ರಯಾಣಿಕನನ್ನು ತಡೆದು ಪರಿಶೀಲಿಸಿದಾಗ, ಆತ ಅಕ್ರಮವಾಗಿ ಅಡಗಿಸಿಟ್ಟಿದ್ದ 1,006.42 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 1.58 ಕೋಟಿ ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು 1962ರ ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



