ಬೆಂಗಳೂರು: ಕೆಂಗೇರಿಯಲ್ಲಿ ಕಾಡಾನೆ ದಾಳಿಗೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಬಲಿ; ಮೃತನ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ; Video
ಸ್ಥಳೀಯ ನಿವಾಸಿಗಳು ಅವರನ್ನು ತಕ್ಷಣವೇ ಮೈಸೂರು ರಸ್ತೆಯಲ್ಲಿರುವ ಆರ್.ಆರ್. ವೈದ್ಯಕೀಯ ಕಾಲೇಜಿಗೆ ಕರೆದೊಯ್ದರಾದರೂ, ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕೆಂಗೇರಿ ಸಮೀಪದ ಆರ್.ಆರ್ ವೈದ್ಯಕೀಯ ಕಾಲೇಜು ಹಿಂಭಾಗದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತ ದುರ್ದೈವಿ. ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವಾಕಿಂಗ್‌ಗೆ ಹೋಗಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎರಡೂ ಕಾಂಪೌಂಡ್‌ಗಳೂ ಸಹ ಉರುಳಿಬಿದ್ದಿದ್ದು, ಸ್ಥಳೀಯರು ಕೂಡ ಆನೇ ದಾಳಿಯಿಂದಲೇ ಘಟನೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ನಿವಾಸಿಗಳು ಅವರನ್ನು ತಕ್ಷಣವೇ ಮೈಸೂರು ರಸ್ತೆಯಲ್ಲಿರುವ ಆರ್.ಆರ್. ವೈದ್ಯಕೀಯ ಕಾಲೇಜಿಗೆ ಕರೆದೊಯ್ದರಾದರೂ, ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿಯಲ್ಲಿ ಆನೆ ಓಡಾಟ ಮಾಡಿರೋದು ಬೆಳಕಿಗೆ ಬಂದಿದೆ. ಬೆಳಗ್ಗೆ 5 ಗಂಟೆ 11 ನಿಮಿಷಕ್ಕೆ ಆನೆ ವೇಗವಾಗಿ ಓಡುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಇನ್ನು ಅದೇ ರಸ್ತೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಲವೇ ಸೆಕೆಂಡ್‌ಗಳಲ್ಲಿ ಆನೆದಾಳಿಯಿಂದ ಬಚಾವಾಗಿದ್ದಾರೆ.
ಈ ಘಟನೆಯು ಕಗ್ಗಲಿಪುರ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದೆ ಮತ್ತು ಆನೆಯು ಬನ್ನೇರುಘಟ್ಟ ಪ್ರದೇಶದಿಂದ ಬಂದಿರಬಹುದು ಎಂದು ಶಂಕಿಸಲಾಗಿದೆ . ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಆನೆಯನ್ನು ಪತ್ತೆಹಚ್ಚಿ ಸೆರೆಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ನಾಗರಾಜ್ ಅವರು ತಮ್ಮ ಪತ್ನಿ ಮತ್ತು ನಾಲ್ವರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದರು ಹಾಗೂ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಈ ಘಟನೆ ಅಂಚೆಪಾಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಕಳೆದ ಕೆಲ ದಿನಗಳಿಂದಲೂ ಕಾಡು ಪ್ರಾಣಿಗಳ ಸಂಚಾರದ ಬಗ್ಗೆ ಮಾಹಿತಿ ಇದ್ದರೂ ಸಹ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯವೇ ನಾಗರಾಜು ಅವರ ಸಾವಿಗೆ ನೇರ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಸ್ಥಳಕ್ಕೆ ಆಗಮಿಸಿ ಸೂಕ್ತ ಕ್ರಮದ ಕುರಿತು ಭರವಸೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಆನೆ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ: ಆನೆ ಸೆರೆಗೆ ಅರಣ್ಯ ಇಲಾಖೆಯ ತಂಡ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಸೂಕ್ತ ಕ್ರಮ ವಹಿಸಲಾಗುತ್ತದೆ. ಮೃತರ ಕುಟುಂಬಸ್ಥರಿಗೆ 20 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



