ಕಲಬುರಗಿ: ಹೆತ್ತ ಕಂದಮ್ಮನನ್ನೇ ಕಸದ ರಾಶಿಗೆ ಎಸೆದ ತಾಯಿ; ಮಹಿಳೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!
ಒಂದು ದಿನದ ಹಸುಗೂಸನ್ನು ಕಸದ ರಾಶಿಯಲ್ಲಿ ಬಿಟ್ಟು ಮಹಿಳೆ ಹಾಗೂ ಆಕೆಯ ತಾಯಿ ಆಟೋರಿಕ್ಷಾದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು ಆಟೋರಿಕ್ಷಾವನ್ನು ತಡೆದು ಮಗುವನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಲಬುರಗಿ: ಹೆತ್ತ ಕಂದಮ್ಮನನ್ನು ಕಸದ ರಾಶಿಗೆ ಎಸೆದು ಪರಾರಿಯಾಗಲು ಯತ್ನಿಸಿದ ತಾಯಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆಯೊಂದು ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ನಡೆದಿದೆ.
ಒಂದು ದಿನದ ಹಸುಗೂಸನ್ನು ಕಸದ ರಾಶಿಯಲ್ಲಿ ಬಿಟ್ಟು ಮಹಿಳೆ ಹಾಗೂ ಆಕೆಯ ತಾಯಿ ಆಟೋರಿಕ್ಷಾದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು ಆಟೋರಿಕ್ಷಾವನ್ನು ತಡೆದು ಮಗುವನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶನಿವಾರ ಈ ಕುರಿತು ಮಾಹಿತಿ ಪಡೆದ ಮಕ್ಕಳ ಸಹಾಯವಾಣಿ ಸಂಯೋಜಕ ಬಸವರಾಜ ತೆಂಗ್ಲಿ, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕರೆ ಮಾಡಿ ಶ್ರೀನಿವಾಸ ಸರಡಗಿ ಗ್ರಾಮದಿಂದ ಕರೆತಂದಿದ್ದ ಮಹಿಳೆ ಹಾಗೂ ಒಂದು ದಿನದ ಹಸುಗೂಸಿನ ಪುನರ್ವಸತಿಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು.
ಪೊಲೀಸ್ ಠಾಣೆಗೆ ತೆರಳಿದಾಗ, ಮಹಿಳೆಯ ತಾಯಿ ತನ್ನ ಮಗಳು ಅವಿವಾಹಿತೆಯಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ತಿಳಿಸಿದ್ದಾರೆ.
ಮಗು ಸಮೇತ ತಾವು ವಾಸಿಸುವ ತಾಂಡಾಕ್ಕೆ ಹೋದರೆ ಅವಮಾನ ಹಾಗೂ ಮುಜುಗರ ಎದುರಿಸಬೇಕಾಗುತ್ತದೆ ಎಂಬ ಭಯದಿಂದ ಮಗುವನ್ನು ಕಸದ ರಾಶಿಯಲ್ಲಿ ಬಿಟ್ಟು ಹೋಗಿದ್ದಾಗಿ ಅವರು ತಿಳಿಸಿದ್ದಾರೆ.
ಮಹಿಳೆ ಹಾಗೂ ಆಕೆಯ ತಾಯಿ ಪರಾರಿಯಾಗುವುದನ್ನು ಗಮನಿಸಿದ ಗ್ರಾಮಸ್ಥರು ಅವರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾವನ್ನು ತಡೆದು ಮಗುವನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತೆರಳಿದ ಪೊಲೀಸರು ಮಗು, ಅದರ ತಾಯಿ ಹಾಗೂ ಅಜ್ಜಿಯನ್ನು ವಶಕ್ಕೆ ಪಡೆದು ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ.
ಮಗು ಹಾಗೂ ತಾಯಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಚಾರ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ಬಳಿಕ, ಶಿಶುವನ್ನು ತ್ಯಜಿಸಲು ಯತ್ನಿಸಿದ ಆರೋಪದಡಿ ಮಹಿಳೆಯ ವಿರುದ್ಧ ಅಧಿಕೃತ ದೂರು ದಾಖಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಕ್ಕಳ ಸಹಾಯವಾಣಿ ಸಂಯೋಜಕ ಹಾಗೂ ಸಲಹೆಗಾರರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



