ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ ರದ್ದು: ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್! ವಿಡಿಯೋದಲ್ಲಿ ಹೇಳಿಕೊಂಡಿದ್ದೇನು?
ಕೃಷಿ ಹೊಂಡದಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಪ್ರತಾಪ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣದಲ್ಲಿ ಕನ್ನಡದ ಬಿಗ್ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಕೃಷಿ ಹೊಂಡದಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಪ್ರತಾಪ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಪ್ರತಾಪ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಯೋಗದ ಉದ್ದೇಶ ಶೈಕ್ಷಣಿಕವಾಗಿದ್ದು, ಯಾವುದೇ ದುರುದ್ದೇಶ ಕಂಡುಬಂದಿಲ್ಲ ಎಂದು ಹೇಳಿ, ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಪ್ರತಾಪ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಸಂಬಂಧಿತ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲಾಗುತ್ತಿದ್ದರೂ ಭವಿಷ್ಯದಲ್ಲಿ ಇದೇ ರೀತಿಯ ಘಟನೆಗಳು ಮರುಕಳಿಸಿದರೆ, ಅವುಗಳನ್ನು ಹೆಚ್ಚು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ತೀರ್ಪಿನ ಬಳಿಕ ವಿಡಿಯೋ ಮಾಡಿ ಕಣ್ಣೀರಿಟ್ಟ ಪ್ರತಾಪ್
ಈ ತೀರ್ಪಿನ ಬಳಿಕ ಡ್ರೋನ್ ಪ್ರತಾಪ್ ವಿಡಿಯೋ ಮಾಡಿ ಭಾವುಕರಾಗಿ ಮಾತನಾಡಿದ್ದು, ಹಲವು ದಿನಗಳಿಂದ ಎದುರಿಸುತ್ತಿದ್ದ ಕಾನೂನು ಹೋರಾಟಕ್ಕೆ ಇದೀಗ ಒಂದು ರೀತಿಯ ನೆಮ್ಮದಿ ಸಿಕ್ಕಿದೆ ಎಂದು ಹೇಳಿದ್ದಾರೆ.
ಕಣ್ಣೀರಿಡುತ್ತಲೇ ಹೈಕೋರ್ಟ್‌ಗೆ ಗೌರವ ಸಲ್ಲಿಸಿದ ಪ್ರತಾಪ್, ತಮ್ಮ ಪರವಾಗಿ ಕಾನೂನು ಹೋರಾಟ ನಡೆಸಿದ ವಕೀಲರಿಗೆ ಮತ್ತು ಅವರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.
ಎಲ್ಲಾ ಕೇಸ್‌ಗಳಿಂದ ಮುಕ್ತಗೊಳಿಸಲಾಗಿದೆ. ನನ್ನ ವಿರುದ್ಧ ಹೇಳಬಾರದ್ದನ್ನೆಲ್ಲ ಹೇಳಿದರು. ಏನೇನೋ ಬರೆದರು. ಕೊನೆಗೂ ದೇವರು ಕಣ್ಣುಬಿಟ್ಟ. ನನಗೆ ಜಯ ಸಿಕ್ಕಿದೆ ಎಂದು ಡ್ರೋನ್ ಪ್ರತಾಪ್ ಹೇಳಿದ್ದಾರೆ.
“ಕೋರ್ಟ್‌ನಿಂದ ಪ್ರಕರಣ ರದ್ದಾಗಿದೆ. ನಿರಪರಾಧಿ ಅಂತ ನಾನು ನಿಂತಿದ್ದೀನಿ. ಗೌರವಾನ್ವಿತ ಕೋರ್ಟ್‌ಗೆ ತಲೆಬಾಗಿ ನಮಸ್ಕರಿಸುತ್ತೇನೆ. ನಿಜವಾಗ್ಲೂ ಥ್ಯಾಂಕ್ ಯು. ಇದು ಸತ್ಯಕ್ಕೆ ಸಿಕ್ಕ ಜಯ” ಎಂದು ಪ್ರತಾಪ್ ಭಾವುಕರಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




