ಮಂಗಳೂರಿನ MRPLನಲ್ಲಿ ಬಾಯ್ಲರ್ ಸ್ಫೋಟ: ಓರ್ವ ಸಾವು, 8 ಮಂದಿಗೆ ಗಾಯ; Video
ಮೃತರನ್ನು ಮುಲ್ಕಿ ನಿವಾಸಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮನೀಶ್ ಕರ್ಕರ(30) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಂಗಳೂರು: ಮಂಗಳೂರು ಬಳಿಯ ಜೋಕಟ್ಟೆಯಲ್ಲಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(MRPL)ನ ಕೋಕರ್ ಹೈಡ್ರೋಟ್ರೀಟರ್(CHT) ಘಟಕದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಮುಲ್ಕಿ ನಿವಾಸಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮನೀಶ್ ಕರ್ಕರ(30) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
CHT(ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್) ಘಟಕದಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅದನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಹೇಳಿದ್ದಾರೆ.
ಶೇ. 35 ರಷ್ಟು ಸುಟ್ಟ ಗಾಯಗಳನ್ನು ಹೊಂದಿದ್ದ ಉದ್ಯೋಗಿ ರಾಜೇಶ್ ಬ್ಯಾಪ್ಟಿಸ್ಟ್ ಅವರನ್ನು ಶ್ರೀನಿವಾಸ ಆಸ್ಪತ್ರೆಗೆ ಸ್ಥಳಾಂತರಿಸಿ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪಕ್ಕದ ಕಚೇರಿಯಲ್ಲಿದ್ದ ಇತರ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಸುಮಾರು 70 ಬಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೋಲ್ಡ್ ಸಪರೇಟರ್ ಒಡೆದು ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎಂದು MRPL ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ಬಳಿಕ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿತ್ತು. ಘಟನೆಯಿಂದ MRPL ಪಕ್ಕದಲ್ಲೇ ಇರುವ ಅಂಗನವಾಡಿಗೂ ಹಾನಿಯಾಗಿದೆ. ಅಂಗನವಾಡಿಯ ಕಿಟಕಿ ಗಾಜು ಹಾಗೂ ಗೋಡೆಗೆ ಹಾನಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳನ್ನು ತಕ್ಷಣ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



