2021ರ ಹೊಸಪೇಟೆ ಮಹಿಳೆ ಕೊಲೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ
ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಸ್ವಾಮಿ ಅವರು ಸೆಪ್ಟೆಂಬರ್ 26ರಂದು ತೀರ್ಪು ಪ್ರಕಟಿಸಿದ್ದು, ಸೆಪ್ಟೆಂಬರ್ 28ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ಬೆಂಗಳೂರು: ಮಹಿಳೆಯನ್ನು ಅಪಹರಿಸಿ, ಸೈನೈಡ್ ಬೆರೆಸಿದ ಮಾತ್ರೆ ನೀಡಿ ಕೊಲೆ ಮಾಡಿ, ಬಳಿಕ ಮೃತದೇಹವನ್ನು ಹೊಸಪೇಟೆ ಸಮೀಪದ ಕಾಲುವೆಯಲ್ಲಿ ಎಸೆದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇಬ್ಬರಿಗೂ ತಲಾ 30 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ.
ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಸ್ವಾಮಿ ಅವರು ಸೆಪ್ಟೆಂಬರ್ 26ರಂದು ತೀರ್ಪು ಪ್ರಕಟಿಸಿದ್ದು, ಸೆಪ್ಟೆಂಬರ್ 28ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಈ ಹಿಂದೆ ನಾಲ್ವರು ಆರೋಪಿಗಳನ್ನೂ ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿತ್ತು.
ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯತ್ರಿನಗರ ನಿವಾಸಿ ಕೆ. ಸೀತಾ ಅವರ ಕೊಲೆ ಪ್ರಕರಣದಲ್ಲಿ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಎಸ್. ನೂರ್ ಅಹ್ಮದ್ (43) ಮತ್ತು ಇ. ಸತ್ಯನಾರಾಯಣ ಅಲಿಯಾಸ್ ಸತ್ಯ (39) ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು.
ಆದರೆ, ಕರ್ನೂಲ್‌ನ ಆರ್. ಬೆಸ್ತಕುಮಾರ್ (45) ಹಾಗೂ ಬಳ್ಳಾರಿ ನಗರದ ಇ. ರಘು ಅಲಿಯಾಸ್ ಮೆಂಟಲ್ ರಘು ಅಲಿಯಾಸ್ ರಾಘವೇಂದ್ರ ಎಂಬ ಇಬ್ಬರು ಆರೋಪಿಗಳು ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಮೃತಪಟ್ಟಿದ್ದರು. ಹೀಗಾಗಿ ಉಳಿದ ನೂರ್ ಅಹ್ಮದ್ ಮತ್ತು ಸತ್ಯನಾರಾಯಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಆಸ್ತಿ ವರ್ಗಾವಣೆ ದಾಖಲೆಗೆ ಸಹಿ ಮಾಡುವ ವಿಚಾರದಲ್ಲಿ ಸೀತಾ ಅಡ್ಡಿಪಡಿಸುತ್ತಿದ್ದರು ಎಂಬ ಕಾರಣಕ್ಕೆ ಅವರನ್ನು ಕೊಲೆ ಮಾಡಲು ಆರೋಪಿಗಳು 2021ರ ಮಾರ್ಚ್ 26ರಂದು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ

ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ D Boss: ದರ್ಶನ್-ವಿಜಯಲಕ್ಷ್ಮಿಯಿಂದ ಮೂರು ಅರ್ಜಿ ಸಲ್ಲಿಕೆ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


