ಹಾಲಿನ ದರ ಒಂದು ರು. ಇಳಿಕೆ
ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ದರ ಇಳಿಕೆ ಮಾಡಿರುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದೆ. ಇದೇ ಬುಧವಾರದಿಂದ ನೂತನ ದರ ಜಾರಿಯಾಗಲಿದೆ.

ಬೆಂಗಳೂರು: ನಂದಿನಿ ಹಾಲಿನ ದರವನ್ನು ರಾಜ್ಯದ ಹಲವೆಡೆ ಒಂದು ರುಪಾಯಿ ಇಳಿಕೆ ಮಾಡಲಾಗಿದೆ.
ನಂದಿನ ಹಾಲಿನ ದರವನ್ನು ನಾಲ್ಕು ರುಪಾಯಿ ಏರಿಕೆ ಮಾಡಿ ಕೆಎಂಎಫ್, ತೀವ್ರ ಟೀಕೆಗೆ ಗುರಿಯಾಗಿತ್ತು. ಕೆಎಂಎಫ್ ನಿರ್ಧಾರಕ್ಕೆ ಪ್ರತಿಪಕ್ಷಗಳು ಸೇರಿದಂತೆ ಸ್ವತಃ ರಾಜ್ಯ ಸರ್ಕಾರವೇ ಅಸಮಾಧಾನಗೊಂಡಿತ್ತು.
ಹೀಗಾಗಿ ಹಾಲಿನ ದರವನ್ನು 1 ರುಪಾಯಿ ಇಳಿಕೆ ಮಾಡುವ ಕುರಿತು ಕೆಎಂಎಫ್ ಚಿಂತನೆ ನಡೆಸಿತ್ತು. ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ದರ ಇಳಿಕೆ ಮಾಡಿರುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದೆ. ಇದೇ ಬುಧವಾರದಿಂದ ನೂತನ ದರ ಜಾರಿಯಾಗಲಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ, ಸಾರ್ವಜನಿಕರ ಮೇಲಿನ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈ ಗೊಂಡಿದ್ದೇವೆ. ದರ ಕಡಿತ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಜಾರಿಯಾಗಲಿದೆ. ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮಾತ್ರ ನೂತನ ದರ ಬುಧವಾರದಿಂದ ಜಾರಿಯಾಗಲಿದೆ. ಉಳಿದಂತೆ ರಾಯಚೂರು, ಗದಗ, ದಕ್ಷಿಣ ಕನ್ನಡ, ಬಳ್ಳಾರಿ, ಹುಬ್ಬಳಿ-ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ದರ ಇಳಿಕೆ ಇಲ್ಲ ಎಂದು ಅವರು ಹೇಳಿದ್ದಾರೆ.
ಮೌಲ್ಯವರ್ಧಿತ ತೆರಿಗೆ, ಸಾರಿಗೆ ಮತ್ತು ಶೀಥಲೀಕರಣದ ವೆಚ್ಚ ದುಬಾರಿಯಾಗುತ್ತಿರುವ ಹಿನ್ನಲೆಯಲ್ಲಿ ಮೇಲ್ಕಂಡ ಜಿಲ್ಲೆಗಳಲ್ಲಿ ದರ ಇಳಿಕೆ ಇಲ್ಲ ಎಂದು ಸೋಮಶೇಖರ ರೆಡ್ಡಿ ಸ್ಪಷ್ಟಪಡಿಸಿದರು.
ಕೆಎಂಎಫ್ ಕಳೆದ ಶುಕ್ರವಾರ ನಂದಿನಿ ಹಾಲಿನ ದರವನ್ನು 4 ರುಪಾಯಿ ಏರಿಕೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


