ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಭಾರತ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ.

ಚೆನ್ನೈ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಭಾರತ ಮಂಗಳವಾರ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ.
ದ್ವಿಶತಕ ಬಾರಿಸಿದ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಪಂದ್ಯಶ್ರೆಷ್ಠ ಪ್ರಶಸ್ತಿ ಪಡೆದರು.
ಭಾನುವಾರ ದಿನಾಂತ್ಯಕ್ಕೆ ತನ್ನ ಮೊದಲ ಇನಿಂಗ್ಸ್ನಲ್ಲಿ 8 ವಿಕೆಟ್ ನಷ್ಟಕ್ಕೆ 515 ರನ್ ಗಳಿಸಿದ್ದ ಭಾರತ, ಸೋಮವಾರ ತನ್ನ ಇನಿಂಗ್ಸ್ ಮುಂದುವರಿಸಿ 572 ರನ್ಗಳಿಗೆ ಆಲೌಟ್ ಆಯಿತು. ತದನಂತರ, ತನ್ನ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ದಿನಾಂತ್ಯಕ್ಕೆ 9 ವಿಕೆಟ್ಗಳನ್ನು ಕಳೆದುಕೊಂಡು 232 ರನ್ ಗಳಿಸಿತ್ತು.
ಇಂದು ಬೆಳಗ್ಗೆ ಮತ್ತೆ ಆಟ ಆರಂಭಿಸಿದ ಆಸ್ಟ್ರೇಲಿಯಾದ ಹನ್ರಿಕೇಸ್(ಅಜೆಯ 81) ಮತ್ತು ಲಯಾನ್(11) ಅವರು ಎರಡನೇ ಇನ್ನಿಂಗ್ಸ್ನಲ್ಲಿ 241 ರನ್ ಸೇರಿಸುವ ಮೂಲಕ ಭಾರತಕ್ಕೆ 50 ರನ್ಗಳ ಗುರಿ ನೀಡಿದರು.
ಅತಿ ಕಡಿಮೆ ಮೊತ್ತದ ಬೆನ್ನು ಹತ್ತಿದ ಟೀಂ ಇಂಡಿಯಾ ತನ್ನ ಇಬ್ಬರು ಆರಂಭಿಕ ಆಟಗಾರರಾದ ಮುರಳಿ ವಿಜಯ್(6) ಮತ್ತು ವಿರೇಂದ್ರ ಸೇಹ್ವಾಗ್(19) ಅವರ ವಿಕೇಟ್ ಕಳೆದುಕೊಂಡು 8 ವಿಕೆಟ್ಗಳ ಜಯ ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


