ಚಿದಂಬರಂ 8ನೇ ಬಾರಿ ಬಜೆಟ್ ಮಂಡನೆ
8ನೇ ಬಾರಿ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ, ಆರ್ಥಿಕ ಬೆಳವಣಿಗೆಯನ್ನು ಸ್ಥಿರಗೊಳಿಸುವುದೇ ಯುಪಿಎ ಸರ್ಕಾರದ ಮೂಲ ಮಂತ್ರ ಎಂದರು.

ನವದೆಹಲಿ: 8ನೇ ಬಾರಿ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು, ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾಗಿಸುವುದೇ ಯುಪಿಎ ಸರ್ಕಾರದ ಮೂಲ ಮಂತ್ರ ಎಂದು ಗುರುವಾರ ಹೇಳಿದ್ದಾರೆ.
ಇಂದು ಲೋಕಸಭೆಯಲ್ಲಿ 2013-14ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸುತ್ತಿರುವ ಚಿದು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯುಪಿಎ ಒತ್ತು ನೀಡಿದೆ. ಆರ್ಥಿಕತೆಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ತೈಲ ಹಾಗೂ ಚಿನ್ನದ ಮಾರುಕಟ್ಟೆಯಲ್ಲಿನ ಏರಿಳಿತದಿಂದ ಹಣದುಬ್ಬರದಲ್ಲಿ ವ್ಯತ್ಯಾಸವಾಗಿದೆ. ಆದರೂ ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ನಾವು ಸಫಲರಾಗಿದ್ದೇವೆ ಎಂದರು.
ಜಾಗತಿಕ ಆರ್ಥಿಕ ಅಭಿವೃದ್ಧಿ ದರ ಶೇ.3.91ರಿಂದ ಶೇ.3.21ಕ್ಕೆ ಇಳಿಕೆಯಾಗಿದೆ. ಚೀನಾ ಮತ್ತು ಇಂಡೋನೇಷಿಯಾ ಹೆಚ್ಚಿನ ಆರ್ಥಿಕ ಪ್ರಗತಿ ಹೊಂದುತ್ತಿವೆ. ಈಗ ಭಾರತವೂ ಅದೇ ಹಾದಿಯಲ್ಲಿ ಸಾಗುತ್ತಿದೆ ಎಂದು ಚಿದು ಹೇಳಿದರು.
11ನೇ ಹಣಕಾಸು ಯೋಜನೆಯಲ್ಲಿ ಶೇ.8ರಷ್ಟು ಆರ್ಥಿಕ ಅಭಿವೃದ್ಧಿ ಸಾಧಿಸಲಾಗಿದೆ ಎಂದು ಚಿದಂಬರಂ ತಿಳಿಸಿದರು.
ಬಜೆಟ್ನ ಮುಖ್ಯಾಂಶಗಳು
ಸರ್ವಶಿಕ್ಷಣ ಅಭಿಯಾನ ಶಿಕ್ಷಣದ ಹಕ್ಕು ಜಾರಿಗೆ 27,286 ಕೋಟಿ
ಮಾನವ ಸಂಪನ್ಮೂಲ ಇಲಾಖೆಗೆ 65,867 ಕೋಟಿ
ಆಯುಷ್ ಇಲಾಖೆಗೆ 1,069 ಕೋಟಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


